ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ.
ಮೂರು ವರ್ಷಕ್ಕೊಮ್ಮೆ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ.
ಈ ವೇಳೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಪವಿತ್ರ ನದಿಗಳಾದ ಕಾವೇರಿ, ಕಪಿನಾ ಹಾಗೂ ಸ್ಪಟಿಕ ಸರೋವರ ಸಂಗಮವಾದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಮಾಘಮಾಸದ ಪುಣ್ಯಸ್ನಾನಕ್ಕೆ ರಾಜ್ಯ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ.
ಕುಂಭಮೇಳಕ್ಕೆ ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.





