ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯ ವತಿಯಿಂದ ಡಿ.೨೦ರಂದು ಮೈಸೂರು ಅರಮನೆಗೆ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತಿ ಅವರು ಆಗಮಿಸುತ್ತಿದ್ದು, ಮೈಸೂರು ಅರಮನೆಯ ಆವರಣದಲ್ಲಿ ಶೃಂಗೇರಿ ಮಠದ ಪುರೋಹಿತರುಗಳಿಂದ ಶ್ರುತಿ ಶಂಕರ ಪಠಣೆ ಮತ್ತು ಗುರುಗಳ ಆರ್ಶೀವಚನ ಕಾರ್ಯಕ್ರಮವು ನಡೆಯುವುದರಿಂದ ಅಂದು ಮಧ್ಯಾಹ್ನ 2 ಗಂಟೆಯಿಂದ 5;30 ರವರೆಗೆ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶವನ್ನು ನಿರ್ಭಂಽಸಲಾಗಿರುತ್ತದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





