ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ಕಳೆದ ಮೂರು ದಿನಗಳಿಂದ ತಲಕಾಡಿನತ್ತ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇಲ್ಲಿನ ಪ್ರಸಿದ್ಧ ದೇವಸ್ಥಾನಗಳ ಕಡೆಗೆ ಹೆಚ್ಚಿನ ಜನಸಂದಣಿ ಕಂಡುಬರುತ್ತಿದೆ.
ಮರಳುಗಾಡಿನ ಸೌಂದಯ್ಯ ಸವಿಯಲು ಹಾಗೂ ಪವಿತ್ರ ದೇವಸ್ಥಾನಗಳ ದರ್ಶನ ಪಡೆಯಲು ರಾಜ್ಯದ ವಿವಿಧೆಡೆಗಳಿಂದ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.
ಬಿಸಿಲ ನಡುವೆಯೂ ಪ್ರವಾಸಿಗರೆಲ್ಲಾ ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮಿಸುತ್ತಿದ್ದು, ನದಿಯ ತಟದಲ್ಲಿ ಆಡವಾಡುವುದು, ತೆಪ್ಪ ಸವಾರಿ ಮಾಡುವುದು ಸೇರಿದಂತೆ ಕುಟುಂಬದವರೊಂದಿಗೆ ನಿಸರ್ಗದ ಮಡಿಲಲ್ಲಿ ಕಾಲ ಕಳೆಯುವ ಮೂಲಕ ವರ್ಷದ ಕೊನೆಯ ದಿನಗಳನ್ನು ಸಂಭ್ರಮದಿಂದ ಕಳೆಯುತ್ತಿದ್ದು, ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳುತ್ತಿದ್ದಾರೆ.





