ಮೈಸೂರು : ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಶೇ.೫೦ರ ದಂಡ ಪಾವತಿಗೆ ಸರ್ಕಾರ ನೀಡಿದ್ದ ಅವಕಾವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು, ೧೯ ದಿನಗಳ ಅವಧಿಯಲ್ಲಿ ಬರೋಬ್ಬರಿ ೨೯.೯೭ ಕೋಟಿ ರೂ. ದಂಡ ಪಾವತಿಸಿದ್ದಾರೆ.
ರಾಜ್ಯ ಸರ್ಕಾರ ದಂಡ ಪಾವತಿಗೆ ಶೇ.೫೦ರಷ್ಟು ರಿಯಾಯಿತಿ ಘೋಷಣೆ ಮಾಡಿರುವುದಕ್ಕೆ ವಾಹನ ಸವಾರರು ಉತ್ತಮ ಪ್ರತಿಕ್ರಿಯೆ ನೀಡಿದ್ದು, ಅ.೧೨ರ ವರೆಗೆ ಒಟ್ಟು ೨೯,೯೭,೬೪,೦೩೦ ರೂ. ಸಂಗ್ರಹವಾಗಿದ್ದು, ಇದರಿಂದಾಗಿ ಒಟ್ಟು ೧೨,೭೦,೮೭೬ ಪ್ರಕರಣಗಳು ಇತ್ಯರ್ಥಗೊಂಡಂತಗಿದೆ.
ಸಂಚಾರ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣ ಇತ್ಯರ್ಥಪಡಿಸಲು ಸರ್ಕಾರ ಆ.೨೩ರಿಂದ ಸೆ.೧೨ರ ವರೆಗೆ ಶೇ.೫೦ ರಿಯಾಯಿತಿ ದಂಡ ಪಾವತಿಗೆ ಅವಕಾಶ ಮಾಡಿಕೊಟ್ಟಿತ್ತು. ಈ ಅವಕಾಶವನ್ನು ಬಳಸಿಕೊಂಡು ವಾಹನ ಚಾಲಕರು ದಂಡ ಪಾವತಿ ಮಾಡಿದ್ದಾರೆ.
ಸೀಟ್ ಬೆಲ್ಟ್ ಧರಿಸದೆ ಪ್ರಯಾಣ, ಪ್ರಯಾಣದ ಸಮಯದಲ್ಲಿ ಮೊಬೈಲ್ ಬಳಕೆ, ತ್ರಿಬಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ, ಸಂಚಾರ ನಿರ್ಬಂಧಿತ ರಸ್ತೆಯಲ್ಲಿ ಪ್ರಯಾಣ, ಸಿಗ್ನಲ್ ಜಂಪ್, ಅತಿ ವೇಗದ ಚಾಲನೆ ಮಾಡುವವರನ್ನು ಎಐ ಕ್ಯಾಮೆರಾ ಗುರುತಿಸುತ್ತಿದೆ. ಅದನ್ನು ಆಧರಿಸಿ ದಂಡ ವಿಧಿಸಲಾಗಿದೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…