ಮೈಸೂರು

ಹಳಿ ತಪ್ಪಿದ ರೈಲು : ಯಶಸ್ವಿ ಅಣಕು ಪ್ರದರ್ಶನ

ಹರಿಹರ : ಅರಸಿಕೆರೆಯಿಂದ ಹಾವೇರಿಗೆ ಹೋಗುತ್ತಿದ್ದ ವಿಶೇಷ ರೈಲಿನ ಎರಡು ಸಾಮಾನ್ಯ ದರ್ಜೆಯ ಪ್ಯಾಸೆಂಜರ್ ಬೋಗಿಗಳು ಹರಿಹರ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ಹಳಿತಪ್ಪಿ ಮಗುಚಿ ಬಿದ್ದಿರುವ ಸನ್ನಿವೇಶ, ತಕ್ಷಣವೇ ರೈಲ್ವೆ ಅಧಿಕಾರಿಗಳು ನಿಗದಿತ ಮಾರ್ಗಸೂಚಿಗಳ ಪ್ರಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನೋಡುಗರ ಗಮನ ಸೆಳೆಯಿತು.

ಎನ್‌ಡಿಆರ್‌ಎಫ್ ತಂಡವು ಅಸಿಸ್ಟೆಂಟ್ ಕಮಾಂಡೆಂಟ್ ಸೆಂಥಿಲ್ ಕುಮಾರ್ ನೇತೃತ್ವದಲ್ಲಿ ಇಪ್ಪತ್ತಮೂರು ಸಿಬ್ಬಂದಿ ಹಾಗೂ ಎಸ್.ಎನ್.ಕಿರಣ್ ಕುಮಾರ್ ನೇತೃತ್ವದ ಎಸ್‌ಡಿಆರ್‌ಎಫ್ ತಂಡ ಮತ್ತು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ಅವರ ನೇತೃತ್ವದ ಜಿಲ್ಲಾ ಅಗ್ನಿಶಾಮಕ ದಳದ ತಂಡ 20 ನಿಮಿಷಗಳಲ್ಲಿ ಸ್ಥಳಕ್ಕೆ ತಲುಪಿದವು. ರೈಲ್ವೆ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಸ್ಥಳದಲ್ಲಿಯೆ ಪ್ರಥಮ ಚಿಕಿತ್ಸೆ ನೀಡಿ ಎರಡು ಬೋಗಿಗಳಲ್ಲಿ ಸಿಲುಕಿಗೊಂಡಿದ್ದ ಸುಮಾರು 22 ಪ್ರಯಾಣಿಕರನ್ನು ಆಂಬ್ಯುಲೆನ್ಸ್‌ ನೊಳಗೆ ಕರೆದುಕೊಳ್ಳಲು ಸಹಕರಿಸಿದ ಅಣಕು ಪ್ರದರ್ಶನ ಯಶಸ್ವಿಯಾಯಿತು.

ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ಮಾತನಾಡಿ, ಇಂತಹ ನಿಯತಕಾಲಿಕ ಕಸರತ್ತಿನ ಮಹತ್ವವನ್ನು ವಿವರಿಸಿದರು. ಮಾನವ ಅಂಶದಿಂದ ಉಂಟಾಗುವ ವಿಪತ್ತುಗಳನ್ನು ತಡೆಗಟ್ಟುವಲ್ಲಿ ಸರಿಯಾದ ವಿಧಾನಗಳನ್ನು ತೋರಿಸುತ್ತವೆ. ಅಮೂಲ್ಯವಾದ ಮಾನವ ಜೀವಗಳ ನಷ್ಟವನ್ನು ತಪ್ಪಿಸಲು ಅತ್ಯಂತ ಮಹತ್ವದ್ದಾಗಿದೆ ಎಂದರು. ರಕ್ಷಣಾ ತಂಡಗಳಲ್ಲದೆ ಆಂಬ್ಯುಲೆನ್ಸ್‌ಗಳೊಂದಿಗೆ ವೈದ್ಯಕೀಯ ವಿಭಾಗದ ಸಿಬ್ಬಂದಿಗಳು, ರೈಲ್ವೆ ರಕ್ಷಣಾ ಪಡೆ, ಅಗ್ನಿಶಾಮಕ ದಳ, ನಾಗರಿಕ ಆಡಳಿತದ ಪ್ರತಿನಿಧಿಗಳು, ಸರ್ಕಾರಿ ರೈಲ್ವೆ ಪೊಲೀಸ್ ಮತ್ತು ಸಿವಿಲ್ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

lokesh

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

3 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

3 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

3 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

3 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

3 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

3 hours ago