Mysore
27
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಜೂ.7 ರಂದು ರೈತರಿಗೆ ತರಬೇತಿ ಕಾರ್ಯಕ್ರಮ

ಮೈಸೂರು: ಇಲವಾಲದ ಯಲಚಹಳ್ಳಿಯ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಅಂಗವಾಗಿ ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮದ ಸಂತೆಮಾಳದಲ್ಲಿ ಜೂ. 07 ರಂದು ಸಂಜೆ 06 ಗಂಟೆಗೆ “ಭತ್ತ ಮತ್ತು ಕಬ್ಬು ಕೃಷಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನಗಳು” ಕುರಿತಾದ ತರಬೇತಿ ಕಾರ್ಯಕ್ರಮವನ್ನು ರೈತರಿಗೆ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ನುರಿತ ವಿಜ್ಞಾನಿಗಳು, ಗುಣಮಟ್ಟದ ಉತ್ಪಾದನೆಯಲ್ಲಿ ಎದುರಿಸುವ ಹಲವಾರು ಸಮಸ್ಯೆ ಮತ್ತು ಅದರ ಪರಿಹಾರದ ಕುರಿತು ರೈತರಿಗೆ ಮಾಹಿತಿ ನೀಡಲಿದ್ದಾರೆ. ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಸೇರಿದ ಆಸಕ್ತ ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿಗಾಗಿ ದೂ.ಸಂ:7760074936 ಅಥವಾ 7795100993 ಸಂಪರ್ಕಿಸಬಹುದು ಎಂದು ತೋಟಗಾರಿಕಾ ಮಹಾವಿದ್ಯಾಲಯದ ಡೀನ್(ತೋಟಗಾರಿಕೆ)  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags:
error: Content is protected !!