ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಅದರಂತೆ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿಗಳನ್ನು ಸರ್ಕಾರ ವಿವಿಧ ಸ್ಥಳಗಳಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.
ಮೈಸೂರು ಜಿಲ್ಲಾ ಎಸ್‌ಪಿ ವಿಷ್ಣುವರ್ಧನ್ ಅವರನ್ನು ಡಿಐಜಿಗೆ ಪದೋನ್ನತಿ ನೀಡಿ ಅವರನ್ನು ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಅವರ ಜಾಗಕ್ಕೆ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ನೇಮಕ ಮಾಡಲಾಗಿದೆ. ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಶೋಭಾರಾಣಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಮೈಸೂರು ಕಾನೂನು ಹಾಗೂ ಸುವ್ಯವಸ್ಥೆ ಡಿಸಿಪಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಬಿಂದುಮಣಿ ಅವರನ್ನು ಕೊಡಗು ಜಿಲ್ಲಾ ಎಸ್‌ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಎಸ್‌ಪಿಯಾಗಿ ಶೋಭಾರಾಣಿ ಅವರನ್ನು ನೇಮಕ ಮಾಡಲಾಗಿದೆ.




