ಮೈಸೂರು

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಅದರಂತೆ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿಗಳನ್ನು ಸರ್ಕಾರ ವಿವಿಧ ಸ್ಥಳಗಳಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.

ಮೈಸೂರು ಜಿಲ್ಲಾ ಎಸ್‌ಪಿ ವಿಷ್ಣುವರ್ಧನ್‌ ಅವರನ್ನು ಡಿಐಜಿಗೆ ಪದೋನ್ನತಿ ನೀಡಿ ಅವರನ್ನು ಕರ್ನಾಟಕ ಪೊಲೀಸ್‌ ಅಕಾಡೆಮಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಅವರ ಜಾಗಕ್ಕೆ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ನೇಮಕ ಮಾಡಲಾಗಿದೆ. ಮಂಡ್ಯ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಶೋಭಾರಾಣಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಮೈಸೂರು ಕಾನೂನು ಹಾಗೂ ಸುವ್ಯವಸ್ಥೆ ಡಿಸಿಪಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಬಿಂದುಮಣಿ ಅವರನ್ನು ಕೊಡಗು ಜಿಲ್ಲಾ ಎಸ್‌ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಎಸ್‌ಪಿಯಾಗಿ ಶೋಭಾರಾಣಿ ಅವರನ್ನು ನೇಮಕ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

10 mins ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

55 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

1 hour ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

2 hours ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

2 hours ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

3 hours ago