ಮೈಸೂರು

ಮಂಗಳಮುಖಿ ಟಾರ್ಚರ್‌ ನೀಡಿದ ಆರೋಪ: ಅಪ್ರಾಪ್ತ ಬಾಲಕ ಆತ್ಮಹತ್ಯೆಗೆ ಶರಣು

ಹುಣಸೂರು: ಮಂಗಳಮುಖಿಯೋರ್ವರು ಟಾರ್ಚರ್‌ ನೀಡುತ್ತಾ ಇದ್ದರು ಎಂಬ ಆರೋಪದ ಮೇರೆಗೆ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.

17 ವರ್ಷದ ರಾಹುಲ್‌ ಮೌರ್ಯ ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ. ಕಳೆದ ಒಂದು ವರ್ಷದಿಂದಲೂ ಮಂಗಳಮುಖಿ ಜೊತೆ ಫೋನ್‌ನಲ್ಲಿ ಮಾತನಾಡುತ್ತಿದ್ದ ಮೌರ್ಯ, ಕಳೆದ ನಾಲ್ಕು ತಿಂಗಳಿನಿಂದ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದನು.

ಪೋಷಕರು ನನ್ನ ಮಗ ಕಾಣೆಯಾಗಿದ್ದಾನೆ ಎಂದು ಭಾವಿಸಿ ಎಲ್ಲಾ ಕಡೆ ಹುಡುಕಿದ್ದರು. ಆದರೆ ಆತ ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಬಳಿಕ ಇದೇ ಜೂನ್.‌23ರಂದು ಮನೆಗೆ ವಾಪಸ್ಸು ಬಂದ ಮೌರ್ಯ ಪೋಷಕರೊಂದಿಗೆ ಗಲಾಟೆ ಮಾಡಿದ್ದನು.

ಬಳಿಕ ಮನನೊಂದು ಮೌರ್ಯ ಆತ್ಮಹತ್ಯೆಗೆ ಶರಣಾಗಿದ್ದು, ಮೃತನ ಪೋಷಕರು ಮಂಗಳಮುಖಿಯ ಮೇಲೆ ಆರೋಪ ಮಾಡಿದ್ದಾರೆ. ನನ್ನ ಮಗ ಯಾವುದೇ ಕಾರಣಕ್ಕೂ ಈ ರೀತಿ ಆತ್ಮಹತ್ಯೆಗೆ ಶರಣಾಗುವವನಲ್ಲ. ಮಂಗಳಮುಖಿ ನನ್ನ ಮಗನ ತಲೆಕೆಡಿಸಿದ್ದಾಳೆ ಎಂದು ಆರೋಪಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

8 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

13 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

13 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

18 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

22 hours ago