ಮೈಸೂರು : ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದ್ದು, ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ನಂಜನಗೂಡಿನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಾರಿಗೆ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…
ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…
ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ…
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…