ಮೈಸೂರು

ಸಾರಿಗೆ ಬಸ್ ಡಿಕ್ಕಿ : ಯುವಕ ಸಾವು

ಮೈಸೂರು : ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದ್ದು, ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೈಸೂರಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ನಂಜನಗೂಡಿನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಸಾರಿಗೆ ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

lokesh

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

5 hours ago