Mysore
27
overcast clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಸಾರಿಗೆ ಬಸ್‌ ಪಲ್ಟಿ : ಪ್ರಯಾಣಿಕರು ಪಾರು

 ಮೈಸೂರು : ನಗರ ಬಸ್ ನಿಲ್ದಾಣದಿಂದ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಡಿವೈಡರ್‌ಗೆ ಗುದ್ದಿದ ಪರಿಣಾಮ ಬಸ್‌ ಪಲ್ಟಿಯಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.

 

ಚಾಮುಂಡಿ ಬೆಟ್ಟಕ್ಕೆ ತಲುಪುವ ರಸ್ತೆಯ ವ್ಯೂ ಪಾಯಿಂಟ್‌ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್‌ ಡಿವೈಡರ್‌ಗೆ ಗುದ್ದಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಪರಾಗಿದ್ದಾರೆ. ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಸಿದ್ಧಾರ್ಥ ನಗರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!