Mysore
21
broken clouds

Social Media

ಗುರುವಾರ, 10 ಅಕ್ಟೋಬರ್ 2024
Light
Dark

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ ಪುಷ್ಪ ಅಮರನಾಥ್ ಅವರು ಮೈಸೂರು ಕೇಂದ್ರಿಯ ಬಸ್ ನಿಲ್ದಾಣದಿಂದ ಮಂಡ್ಯವರೆಗೂ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಿದರು.

ಈ ವೇಳೆ ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣಕ್ಕೆ ಆಗಮಿಸಿದ ಮಹಿಳಾ ಪ್ರಯಾಣಿಕರಿಗೆ ಸಿಹಿ ವಿತರಣೆ ಮಾಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕಾಂಗ್ರೆಸ್ ಶಕ್ತಿ ಯೋಜನೆಯ ಮೂಲಕ ಬಸ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡುವ ಅನುಕೂಲ ಮಾಡಿದೆ. ಮಹಿಳೆಯಾಗಿ ನಾನು ಕೂಡ ಶಕ್ತಿ ಯೋಜನೆಯನ್ನ ಅಭಿನಂದಿಸುತ್ತೇನೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ನುಡಿದಂತೆ ನೆಡೆದಿದೆ, ನಡೆಯುತ್ತಿದೆ ಎಂದು ಹೇಳಿದರು.

ಮಹಿಳೆಯರ ಬಳಿಗೆ ತೆರಳಿ ನಾನು ಅಭಿಪ್ರಾಯ ಸಂಗ್ರಹಿಸಿದ್ದೇನೆ. ಎಲ್ಲಾ ಮಹಿಳೆಯರು ಖುಷಿಯಿಂದ ಶಕ್ತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಮಹಿಳೆಯರು ತವರು ಮನೆ ಸೇರಿದಂತೆ ಬೇರೆ ಬೇರೆ ಕಡೆ ಪ್ರಯಾಣ ಮಾಡುತ್ತಿದ್ದಾರೆ. ಬಡವರು ಮತ್ತು ಶ್ರೀಮಂತರು ಎಲ್ಲರಿಗೂ ಈ ಯೋಜನೆ ಒಂದು ಶಕ್ತಿಯಾಗಿದೆ. ಸಿದ್ದರಾಮಯ್ಯ ರವರ ಸರಕಾರವನ್ನ ಮಹಿಳೆಯರು ಹಾರೈಸುತ್ತಿದ್ದಾರೆ ಎಂದರು.

ಗ್ಯಾರಂಟಿ ನಿಲ್ಲಲ್ಲ
ನಾನು ಗ್ಯಾರಂಟಿ ಅನುಷ್ಠಾನ ಉಪಾಧ್ಯಕ್ಷೆಯಾಗಿ ಖುದ್ದು ಫಲಾನುವಿಗಳ ಅಭಿಪ್ರಾಯ ಸಂಗ್ರಹಿಸಲು ಮೈಸೂರಿನಿಂದ ಮಂಡ್ಯಕ್ಕೆ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದೇನೆ. ಮುಂದಿನ ದಿನ ಗಳಲ್ಲಿ ಮತ್ತಷ್ಟು ಬಸ್ ಗಳ ವ್ಯವಸ್ಥೆ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲೋದಿಲ್ಲ ಇದು ಜನರಿಗಾಗಿ ಮಾಡಿರುವುದು ಮುಂದುವರೆಯುತ್ತದೆ ಎಂದರು.

ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆ ಉಂಟಾಗಿತ್ತು ಆಗಾಗಿ ಎರಡು ತಿಂಗಳ ಹಣ ಹಾಕಲು ಸಾಧ್ಯವಾಗಿಲ್ಲ. ಸ್ವತಃ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಭರವಸೆ ನೀಡಿದ್ದಾರೆ ಕೆಲವೇ ದಿನಗಳಲ್ಲಿ ಬಾಕಿ ಹಣವನ್ನ ಕೂಡ ಜಮಾ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಅಧಿಕಾರಿಗಳಾದ ದಿನೇಶ್ DTO ಕೆ ಎಸ್ ಆರ್ ಟಿ ಸಿ ಮತ್ತು ಕಲಾಶ್ರೀ ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್ ATM ಕೆ ಎಸ್ ಆರ್ ಟಿ ಸಿ ಉಪಸ್ಥಿತರಿದ್ದರು.

Tags: