Mysore
22
overcast clouds
Light
Dark

ಬಿರುಗಾಳಿ, ಮಳೆಗೆ ಮನೆ ಮೇಲೆ ಬಿದ್ದ ಅರಳಿಮರ

ನಂಜನಗೂಡು: ಗುರುವಾರ(ಮೇ.9) ತಡರಾತ್ರಿ ಸುರಿದ ಬಿರುಗಾಳಿ ಮಳೆಗೆ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾದ ಘಟನೆ ನಗರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಪುರದಲ್ಲಿ ನಡೆದಿದೆ.

ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಮರ ಉರುಳಿ‌ ಬಿದ್ದಿದ್ದು, ಕೊಟ್ಟಿಗೆಯಲ್ಲಿದ್ದ ಹಸುಗಳನ್ನು ಸ್ಥಳಾಂತರ ಮಾಡಿದ್ದರಿಂದ ಹಸುಗಳು ಪ್ರಾಣಪಾಯದಿಂದ ಪಾರಾಗಿವೆ. ಮಳೆಯ ರಭಸಕ್ಕೆ ವಿದ್ಯುತ್ ಕಂಬಗಳು ಸಹ ಧರೆಗುರಿಳಿದೆ. ಸೆಸ್ಕ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ‌ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದರು.

ಬಿರುಗಾಳಿ ಮಳೆಯಿಂದ ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದು ಭಾಗಶಃ ಹಾನಿಯಾಗಿದ್ದು, ಸರ್ಕಾರದಿಂದ ಮಳೆ ಹಾನಿ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡ ಸಣ್ಣೇಗೌಡ ಮನವಿ ಮಾಡಿದ್ದಾರೆ.