ನಂಜನಗೂಡು: ಗುರುವಾರ(ಮೇ.9) ತಡರಾತ್ರಿ ಸುರಿದ ಬಿರುಗಾಳಿ ಮಳೆಗೆ ಬೃಹತ್ ಗಾತ್ರದ ಅರಳಿಮರ ಉರುಳಿ ಬಿದ್ದು ನಾಲ್ಕು ಮನೆಗಳಿಗೆ ಹಾನಿಯಾದ ಘಟನೆ ನಗರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಪುರದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಮರ ಉರುಳಿ ಬಿದ್ದಿದ್ದು, ಕೊಟ್ಟಿಗೆಯಲ್ಲಿದ್ದ ಹಸುಗಳನ್ನು ಸ್ಥಳಾಂತರ ಮಾಡಿದ್ದರಿಂದ ಹಸುಗಳು ಪ್ರಾಣಪಾಯದಿಂದ ಪಾರಾಗಿವೆ. ಮಳೆಯ ರಭಸಕ್ಕೆ ವಿದ್ಯುತ್ ಕಂಬಗಳು ಸಹ ಧರೆಗುರಿಳಿದೆ. ಸೆಸ್ಕ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದರು.
ಬಿರುಗಾಳಿ ಮಳೆಯಿಂದ ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದು ಭಾಗಶಃ ಹಾನಿಯಾಗಿದ್ದು, ಸರ್ಕಾರದಿಂದ ಮಳೆ ಹಾನಿ ಪರಿಹಾರ ನೀಡಬೇಕು ಎಂದು ಗ್ರಾಮದ ಮುಖಂಡ ಸಣ್ಣೇಗೌಡ ಮನವಿ ಮಾಡಿದ್ದಾರೆ.
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…
‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…
ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…