ಮೈಸೂರು

ಮರ ಹನನ : ಪರ್ಯಾಯ ಸಸಿ ನೆಟ್ಟಿರುವ ಪುರಾವೆಗೆ ಪರಿಸರವಾದಿಗಳ ಒತ್ತಾಯ

ಮೈಸೂರು : ಬೆಳೆದು ನಿಂತಿದ್ದ 40 ಮರಗಳನ್ನು ಕಳೆದ ಏಪ್ರಿಲ್‌ನಲ್ಲಿ ಕಡಿದು ಹಾಕಿದ್ದ ಹೈದರ್‌ ಆಲಿ ರಸ್ತೆಯಲ್ಲಿ ಗುರುವಾರ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು, ಈ ವೇಳೆ ಕಡಿದ ಮರಗಳಿಗೆ ಪರ್ಯಾಯವಾಗಿ ಸಸಿ ನೆಟ್ಟಿರುವ ಪುರಾವೆ ನೀಡುವಂತೆ ಒತ್ತಾಯಿಸಿ, ಪರಿಸರವಾದಿಗಳು ಕೆಲಕಾಲ ಕಾಮಗಾರಿಯನ್ನು ಸ್ಥಗಿತಗೊಳಿಸಿದ ಘಟನೆ ನಡೆಯಿತು.

ಕಳೆದ ಎರಡು ದಿನಗಳಿಂದ ಮೈಸೂರು ನಗರ ಪಾಲಿಕೆ ವತಿಯಿಂದ ರಸ್ತೆ ಅಗಲೀಕರಣ ಕಾರ್ಯವನ್ನು ಆರಂಭಿಸಿದೆ. ಅಲ್ಲಿ ಈಗಾಗಲೇ ರಸ್ತೆಯ ಒಂದು ಬದಿಯಲ್ಲಿ ಅಗೆಯಲಾಗಿದ್ದು, ಜಲ್ಲಿ, ಮಣ್ಣನ್ನು ತಂದು ಹಾಕಲಾಗಿದೆ.
ಈ ವಿಚಾರ ಅರಿತ ಮೈಸೂರು ಗ್ರಹಕರ ಪರಿಷತ್ತಿನ ಕಾರ್ಯಕರ್ತರು ಹಾಗೂ ಅಧ್ಯಕ್ಷ ಡಾ.ಭಾಮಿ ವಿ. ಶೆಣೈ, ರಾಜ್ಯ ಪರಿಸರ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ, ಮೈಸೂರು ಜಿಲ್ಲಾ ಪರಿಸರ ಸಮಿತಿ ಅಧ್ಯಕ್ಷ ಪರಶುರಾಮೇಗೌಡ ಮತ್ತು ಇತರರು ಹಸಿರು ಟೋಪಿ ಧರಿಸಿ ದಿಢೀರ್ ಪ್ರತಿಭಟನೆ ನಡೆಸಿದರು.

ಈ ವೇಳೆ ನಗರಪಾಲಿಕೆ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕಡಿದಿರುವ ಮರಗಳಿಗೆ ಪರ್ಯಾಯವಾಗಿ ಒಂದಕ್ಕೆ ಹತ್ತರಷ್ಟು ಸಸಿಗಳನ್ನು ನೆಟ್ಟಿರುವುದಕ್ಕೆ ಪುರಾವೆಗಳನ್ನು ಒದಗಿಸಿದ ನಂತರವೇ ಕಾಮಗಾರಿಗಳನ್ನು ಪುನರಾರಂಭಿಸಬೇಕೆಂದು ಒತ್ತಾಯಿಸಿದರು.

ಹೈದರ್ ಅಲಿ ರಸ್ತೆಯಲ್ಲಿ ಮತ್ತೆ ಹಸಿರು ಕಾಣಬೇಕು. ರಸ್ತೆ ಅಗಲವಾಗಿರುವುದರಿಂದ ಮತ್ತೆ ರಸ್ತೆ ಅಗಲೀಕರಣ ಕಾಮಗಾರಿ ಬೇಡ. ಕೂಡಲೇ ಕಾಮಗಾರಿಯನ್ನು ನಿಲ್ಲಿಸಿ ಅಲ್ಲಿನ ಎರಡೂ ಬದಿಯಲ್ಲಿ ಸಸಿಗಳನ್ನು ನೆಡುವಂತೆ ಎಂಜಿಪಿ ಸದಸ್ಯರು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ನಗರಪಾಲಿಕೆ ಅಧಿಕಾರಿಗಳು, ಇಲ್ಲಿ ಬಾಕ್ಸ್ ಮಾದರಿಯ ಚರಂಡಿಗಳ ನಿರ್ಮಾಣಕ್ಕಾಗಿ ಭೂಮಿಯನ್ನು ಸಮತಟ್ಟು ಮಾಡುವ ಕೆಲಸವನ್ನು ಪ್ರಾರಂಭಿಸಿದೆ. ನಂತರದ ಹಂತಗಳಲ್ಲಿ, ಎರಡೂ ಬದಿಗಳಲ್ಲಿ ಪಾದಚಾರಿ ಮಾರ್ಗಗಳು, ಬೀದಿ ದೀಪಗಳು ಮತ್ತು ಡಾಂಬರೀಕರಣವನ್ನು ಯೋಜಿಸಲಾಗಿದೆ ಎಂದರು.

ಅಂದಾಜು ವೆಚ್ಚ 4 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದೆ. ಆರು ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಅಷ್ಟರಲ್ಲಿ ರಸ್ತೆಯ ಎರಡೂ ಬದಿ ಹಾಗೂ ಮದ್ಯಭಾಗದಲ್ಲಿ ಒಟ್ಟು 130 ಸಸಿಗಳನ್ನು ನಡೆಲಾಗುವುದು. ಉಳಿದಂತೆ 370 ಗಿಡಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ನೆಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಅವರ ಮಾತಿಗೆ ಒಪ್ಪದ ಪರಿಸರವಾದಿಗಳು ನೀವು ಸರ್ವೋಚ್ಚ ನ್ಯಾಯಾಲಯದ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಕಾಮಗಾರಿಯನ್ನು ನಡೆಸುತ್ತಿದ್ದೀರಿ. ಈ ಸಂಬಂದ ನಾವುಗಳು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮ್ಮೆ ಹೂಡುತ್ತೇವೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ವಾದಿಸಿದರು. ಪ್ರತಿಭಟನೆಯಲ್ಲಿ ಸಿಂಧುವಳ್ಳಿ ಅಕ್ಬರ್, ಗಂಗಾವತಿ ಮತ್ತು ಇತರ ಕಾರ್ಯಕರ್ತರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

3 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

5 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

8 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago