ಮೈಸೂರು

ಶೈಕ್ಷಣಿಕ ಸಮಸ್ಯೆ ಎದುರಿಸುತ್ತಿರುವ ಬುಡಕಟ್ಟು ಸಮುದಾಯ : ಕುಲಪತಿ ಗಂಗಾಧರ್ ಆತಂಕ

ಮೈಸೂರು : ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯವಾಗಿದ್ದು, ಸೀಸನಲ್ ಮೈಗ್ರೇಷನ್‌ನಿಂದ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣ ಮೊಟಕಾಗುವುದು ಸೇರಿದಂತೆ ನಾನಾ ರೀತಿಯ ಸವಾಲುಗಳನ್ನು ಎದುರಿಸುವಂತಾಗಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ.ಆರ್. ಗಂಗಾಧರ್ ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಸೋಮವಾರ ನಡೆದ ಬುಡಕಟ್ಟು ಶಿಕ್ಷಣ ಸಮಸ್ಯೆಗಳು ಮತ್ತು ಸವಾಲುಗಳು ಕುರಿತ ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬುಡಕಟ್ಟು ಸಮುದಾಯದವರು ಕೆಲವು ತಿಂಗಳ ಕಾಲ ಕೆಲಸಕ್ಕಾಗಿ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ನೆಲೆಸುತ್ತಾರೆ. ಆಗ ಅವರ ಮಕ್ಕಳು ಸರಿಯಾಗಿ ಶಿಕ್ಷಣ ಪಡೆಯಲಾಗದೆ ಅರ್ಧಕ್ಕೆ ಮೊಟಕುಗೊಳಿಸುತ್ತಾರೆ. ಕೆಲ ಕಾಫಿ ತೋಟದವರು ಸಾರಾಯಿ ಕೊಟ್ಟು ಒಂದು ತಿಂಗಳ ಕೆಲಸವನ್ನು ೧೫ ದಿನಕ್ಕೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಈ ಸಮುದಾಯ ವ್ಯಸನಕ್ಕೆ ಒಳಗಾಗುತ್ತದೆ. ಬುಡಕಟ್ಟು ಸಮುದಾಯ ಬದಲಾದ ಜೀವನ ಶೈಲಿಯಿಂದ ಚಿಕ್ಕವಯಸ್ಸಿನಲ್ಲೆ ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಬುಡಕಟ್ಟು ಸಮುದಾಯದವರಿಗೆ ಸಮರ್ಪಕವಾಗಿ ಶಿಕ್ಷಣ ದೊರೆಯುತ್ತಿಲ್ಲ. ಸರ್ಕಾರ ಬಜೆಟ್‌ನಲ್ಲಿ ಬುಡಕಟ್ಟು ಸಮುದಾಯದ ಶಿಕ್ಷಣಕ್ಕೆ ಹೆಚ್ಚು ಹಣ ನೀಡಿದರೂ ಅದು ಖರ್ಚಾಗುತ್ತಿಲ್ಲ. ಏಕೆಂದರೆ ಅಧಿಕಾರಿಗಳಿಗೆ ಇಚ್ಛಾ ಶಕ್ತಿಯಿಲ್ಲ. ಸರ್ಕಾರ ಅಗತ್ಯಕ್ಕೆ ತಕ್ಕಷ್ಟು ಶಿಕ್ಷಕರನ್ನು ನೇಮಕ ಮಾಡಬೇಕು. ಭೂಮಾಲೀಕರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಆಸಕ್ತಿ ವಹಿಸಬೇಕು. ವಸತಿ ಯೋಜನೆಯಡಿ ವೈಜ್ಞಾನಿಕವಾಗಿ ಮನೆ ನಿರ್ಮಿಸಿಕೊಡಬೇಕು. ಭೂಮಿ ನೀಡಿ ವ್ಯವಸಾಯ ಮಾಡಲು ತರಬೇತಿ ನೀಡಬೇಕು ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕರಾದ ಪ್ರೊ. ಜೆ. ಸೋಮಶೇಖರ್ ಮಾತನಾಡಿ, ಸಮಾಜದಲ್ಲಿ ಬಡವರಿಗೊಂದು ಶಿಕ್ಷಣ, ಶ್ರೀಮಂತರಿಗೊಂದು ಶಿಕ್ಷಣ ಇರುವಾಗ ಬುಡಕಟ್ಟು ಸಮುದಾಯದವರ ಸ್ಥಿತಿಯೇನು? ಬುಡಕಟ್ಟು ಸಮುದಾಯದವರು ಪಿಎಚ್‌ಡಿ ಮಾಡಿದರೂ ಕೆಲಸ ಸಿಗುತ್ತಿಲ್ಲ. ನಿಜವಾದ ಬುಡಕಟ್ಟುಗಳ ಸ್ಥಾನವೇನು? ರಾಜ್ಯ ಸರ್ಕಾರ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಕಾಡಿನಲ್ಲಿರುವ ಬುಡಕಟ್ಟು ಸಮುದಾಯದವರ ಬದುಕನ್ನು ಸಮಾಜದ ಮುಖ್ಯವಾಹಿನಿಗೆ ತರದಿದ್ದರೆ ಭಾರತಕ್ಕೆ ಬಹುದೊಡ್ಡ ಸವಾಲಾಗುತ್ತದೆ ಎಂದ ಅವರು, ನಮ್ಮ ಅಂಬೇಡ್ಕರ್ ಕೇಂದ್ರದ ವತಿಯಿಂದ ಬುಡಕಟ್ಟು ಸಮುದಾಯದ ಮಕ್ಕಳ ಶಿಕ್ಷಣದ ಬಗ್ಗೆ ನಿಮ್ಮ ಜೊತೆ ಕೈಜೋಡಿಸಲು ಉತ್ಸುಕವಾಗಿದೆ ಎಂದರು.

ವಿಚಾರ ಸಂಕಿರಣದಲ್ಲಿ ವೀಡಿಯೋ ಕಾನ್ಫೆರನ್ಸ್ ಮೂಲಕ ಬುಡಕಟ್ಟು ಸಮುದಾಯದ ಮುಖಂಡರು ಹೇಳಿದ ಸಮಸ್ಯೆಗಳನ್ನು ಆಲಿಸಿದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಂದೀಪ್ ಡಿ., ನಿರ್ದೇಶಕ ಯೋಗೀಶ್ ಟಿ. ಮಾತನಾಡಿ ಬುಡಕಟ್ಟು ಮುಖಂಡರಾದ ನೀವು ಹೇಳಿರುವ ಸಮಸ್ಯೆಗಳನ್ನು ಯಾವ ರೀತಿ ಬಗೆಹರಿಸಬಹುದು ಎಂದು ಸರ್ಕಾರದ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಬಿ.ಎಸ್. ಪ್ರಭಾ ಅರಸ್ ಮಾತನಾಡಿ, ಭಾರತದಲ್ಲಿ ಶೈಕ್ಷಣಿಕ ಪ್ರಗತಿ ಶೇ. ೭೭ ರಷ್ಟಿದ್ದರೆ ಪರಿಶಿಷ್ಠ ಪಂಗಡದ ಶೈಕ್ಷಣಿಕ ಪ್ರಗತಿ ಶೇ. ೫೮ ರಷ್ಟಿದೆ. ಅದರಲ್ಲೂ ಗ್ರಾಮೀಣ ಬುಡಕಟ್ಟು ಜನರ ಶೈಕ್ಷಣಿಕ ಪ್ರಗತಿ ಶೇ. ೪೨ ರಷ್ಟಿದೆ. ಪಿ.ವಿ.ಟಿ.ಜಿ ಸಮುದಾಯದವರ ಶೈಕ್ಷಣಿಕ ಪ್ರಗತಿ ತೀರ ಕಡಿಮೆ ಇದ್ದು ಶೇ. ೪೦ ರಷ್ಟು ವಿದ್ಯಾರ್ಥಿಗಳು ೮ನೇ ತರಗತಿಯಲ್ಲೇ ಶಾಲೆ ಬಿಡುತ್ತಿದ್ದಾರೆ. ಶೇ. ೨ ರಷ್ಟು ಜೇನು ಕುರುಬ ಮಕ್ಕಳು ಕಾಲೇಜು ಶಿಕ್ಷಣ ಪಡೆಯುತ್ತಿದ್ದಾರೆ. ಆದ್ದರಿಂದ ಈ ವಿಚಾರ ಸಂಕಿರಣ ಮಾಡಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಪ್ರೊ. ವೆಂಕಟೇಶ್‌ಕುಮಾರ್ ಜಿ., ಪ್ರೊ. ರಮಣಯ್ಯ, ಉಪನಿರ್ದೇಶಕಿ ಬಿ.ಎಸ್. ಪ್ರಭಾಅರಸ್, ಸಂಶೋಧನಾಧಿಕಾರಿ ಎಲ್. ಶ್ರೀನಿವಾಸ, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಂ.ಕೆ. ಮಲ್ಲೇಶ್, ಡಾ. ಮೋಹನ್‌ಕುಮಾರ್, ಡಾ. ಮಂಜುನಾಥ್, ಡಾ. ರವಿಕುಮಾರ್, ಡಾ. ಕಲಾವತಿ, ಭವ್ಯ, ಗುಣಧರ್, ಪುಷ್ಪಲತಾ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

2 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

2 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

2 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

3 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

3 hours ago