ಮೈಸೂರು

ಸಾಧಕರಿಗೆ ಶಾಸಕ ಶ್ರೀವತ್ಸರಿಂದ ಗೌರವ ಸಮರ್ಪಣೆ

ಮೈಸೂರು : ಭಾರತೀಯ ಜನತಾ ಪಾರ್ಟಿಯ ಮಾತೃ ಪಕ್ಷ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ ಶಾಮ್ ಪ್ರಸಾದ್ ಮುಖರ್ಜಿ ರವರ ಪುಣ್ಯ ಸ್ಮರಣೆಯ ಅಂಗವಾಗಿ ಬಿಜೆಪಿ ಕೃಷ್ಣರಾಜ ಕ್ಷೇತ್ರದ ವತಿಯಿಂದ 5 ಜನ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ ಮಾಡಲಾಯಿತು.

ಡಾ.ಶಾಮ ಪ್ರಸಾದ್ ಮುಖರ್ಜಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀ ಟಿ.ಎಸ್. ಶ್ರೀವತ್ಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಐವರಿಗೆ ಶಾಸಕರು ಸನ್ಮಾನ ಮಾಡಿದರು.

ಕಾರ್ಯಕ್ರಮದಲ್ಲಿ ಕೆ.ಆರ್. ಕ್ಷೇತ್ರದ ಬಿಜೆಪಿ ಅಧ್ಯಕ್ಷ ಯು.ಜಿ. ಗೋಪಾಲ್ ರಾಜ್ ಅರಸ್, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್, ಜಯಶಂಕರ್, ಕಾರ್ಯಕ್ರಮದ ಮುಖ್ಯ ಭಾಷಣಕಾರರಾದ ಪ್ರೊ. ಶಿವಾನಂದ್, ಸನ್ಮಾಮಾನಿತಾರದ, ಡಾ. ಚಂದ್ರಶೇಖರ್, ಯೋಗಾ ಪ್ರಕಾಶ್, ಯೋಗಾ ರಂಗನಾಥ್, ಶಿವಕುಮಾರ್ ಹೆಚ್.ಎನ್, ಕು. ದೀಕ್ಷಿತಾ, ಬಿಜೆಪಿ ಮುಖಂಡರಾದ ಸೋಮಸುಂದರ್, ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ಮಾಜಿ ಪಾಲಿಕೆ ಸದಸ್ಯ ಪ್ರಸನ್ನ, ಶೈಲೇಂದ್ರ, ವಿದ್ಯಾ ಅರಸ್, ಶಾರದ ಈಶ್ವರ್, ಸೌಭಾಗ್ಯ ಮೂರ್ತಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ರವಿ, ಎಸ್.ಟಿ. ಮೊರ್ಚಾ ಅಧ್ಯಕ್ಷ ನಂದೀಶ್, ಉಪಾಧ್ಯಕ್ಷರಾದ ಓಂ ಶ್ರೀನಿವಾಸ್, ಟಿವಿಎಸ್ ನಾಗರಾಜ್, ಮನೋಜ್, ಕಾರ್ಯದರ್ಶಿ ರೇಖಾ, ಕಾವೇರಿ, ಹರ್ಷ, ಪ್ರದೀಪ್, ಕಿಶೋರ್ ಹಾಗು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

43 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago