ಮೈಸೂರು : ಅನಾರೋಗ್ಯದಿಂದ ನಿಧನರಾದ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ.ಡಿ.ಗೋಪಿನಾಥ್, ಉಪಾಧ್ಯಕ್ಷರಾದ ಎಂ.ಎನ್.ಸೌಮ್ಯ, ನಿರ್ದೇಶಕರಾದ ಎಂ.ಆರ್.ಬಾಲಕೃಷ್ಣ, ವಿಕ್ರಂ ಅಯ್ಯಂಗಾರ್, ಎನ್.ನಾಗಶ್ರೀ, ಕೆ.ಎನ್.ಅರುಣ್, ಎಸ್.ರಾಜಮ್ಮ, ಪ್ರಭಾರ ಕಾರ್ಯದರ್ಶಿ ಎನ್.ವೀಣಾ ಹಾಗೂ ಸಿಬ್ಬಂದಿ ವರ್ಗದವರು ಚಿತ್ರದಲ್ಲಿದ್ದಾರೆ.





