ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಕೆಸರೆ ನಿವಾಸಿಗಳಾದ ಸುಲೇಮಾನ್ ಹಾಗೂ ಸಿದ್ದಿಕ್ ಪಾಷಾ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಂಜನಗೂಡು ಪಟ್ಟಣ ಮಾತ್ರವಲ್ಲದೆ ಹೆಚ್.ಡಿ.ಕೋಟೆ, ಬಿಳಿಗೆರೆ, ಟಿ.ನರಸೀಪುರ, ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಖದೀಮರು ಜಾನುವಾರು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ನಂಜನಗೂಡು ಟೌನ್ ಠಾಣೆ ಪೊಲೀಸರು ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಹಲವು ಕಡೆ ಹಸುಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಮಡಿಕೇರಿ: ಮಗನನ್ನು ಕಳೆದುಕೊಳ್ಳುವ ನೋವಿನ ನಡುವೆಯೂ, ಆತನ ಅಂಗಾಂಗಗಳು ಮತ್ತೊಬ್ಬರ ಬದುಕಿಗೆ ಆಸರೆಯಾಗಲಿ ಎಂದು ಕುಟುಂಬವೊಂದು ಮಾನವೀಯ ನಿರ್ಧಾರ ಕೈಗೊಂಡಿದೆ.…
ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ರಾಜ್ಯ ಸರ್ಕಾರಕ್ಕೆ ಕೆಲವು ದರ ಏರಿಕೆಗಳು ಅನಿವಾರ್ಯವಾಗಿವೆ…
ಪಿರಿಯಾಪಟ್ಟಣ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.…
ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ನವೆಂಬರ್ 11ರ ಮಧ್ಯಾಹ್ನ ದೇವಾಲಯದ…
ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್ಗೆ ಎಥನಾಲ್ ಮಿಶ್ರಣ…
ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಚಿಕಿತ್ಸೆಗೆ ವ್ಯವಸ್ಥೆ…