ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು
ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಸತ್ಯಗಾಲ ಗ್ರಾಮದಲ್ಲಿ ನಡೆದಿದೆ.
ವಿನೋದ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮನೆಗೆ ಕರೆತರಲು ಹೋದ ವೇಳೆ ಈ ಘಟನೆ ನಡೆದಿದೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಪಿರಿಯಾಪಟ್ಟಣ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.




