ಮೈಸೂರು : ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಎಚ್ ಡಿ ಕೋಟೆ ತಾಲೂಕಿನಲ್ಲಿ ಮಳೆಯಿಂದಾಗಿ ಎರಡು ಮನೆಗಳು ಜಖಂಗೊಂಡಿದೆ. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮಚ್ಚೂರು ಗ್ರಾಮದ ರೈತ ಗೋವಿಂದ ಎಂಬುವವರಿಗೆ ಸೇರಿದ ಮನೆಯ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಸಂಪೂರ್ಣ ನಾಶವಾಗಿದೆ. ಇನ್ನು ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.