Mysore
24
overcast clouds

Social Media

ಬುಧವಾರ, 14 ಜನವರಿ 2026
Light
Dark

ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ.

ಮೊದಲನೇ ಘಟನೆಯಲ್ಲಿ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಕಡಕೊಳ ನಿವಾಸಿ ನಂಜನಾಯಕ ಎಂಬವರು ಮೃತಪಟ್ಟಿದ್ದಾರೆ. ಬ್ರೆಡ್ ತರಲೆಂದು ಬೇಕರಿಗೆ ಹೋಗಿದ್ದ ವೇಳೆ ಈ ದುರಂತ ನಡೆದಿದೆ.

ಅನಾರೋಗ್ಯಕ್ಕೀಡಾಗಿದ್ದ ನಂಜನಾಯಕ ಅವರು ರಾತ್ರಿ 9 ಗಂಟೆ ವೇಳೆಯಲ್ಲಿ ಬ್ರೆಡ್ ತರಲೆಂದು ಕಡಕೊಳದ ಬೇಕರಿ ಬಳಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ನಂಜನಗೂಡು ಕಡೆಯಿಂದ ಬಂದ ಟಿಟಿ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ.

ಕೂಡಲೇ ಸ್ಥಳೀಯರು ಅವರನ್ನು ಆಂಬುಲೆನ್ಸ್ ಮೂಲಕ ಕೆಆರ್ ಆಸ್ಪತ್ರೆಗೆ ಕರೆತಂದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಈ ಸಂಬಂಧ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡನೇ ಘಟನೆಯಲ್ಲಿ ಸ್ವಯಂ ಅಪಘಾತದಲ್ಲಿ ಮಧ್ಯಪ್ರದೇಶ ಮೂಲದ ರವಿಕಾಂತ್ ಎಂಬವರು ಸಾವನ್ನಪ್ಪಿದ್ದಾರೆ. ಖಾಸಗಿ ಕಾರ್ಖಾನೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಲಿಂಗದೇವರಕೊಪ್ಪಲಿನಲ್ಲಿ ವಾಸವಿದ್ದರು. ಕ್ರಿಕೆಟ್ ಆಡುವ ಸಲುವಾಗಿ ಬೆಳವಾಡಿಯ ಮೈದಾನಕ್ಕೆ ತೆರಳಿದ್ದರು. ನಂತರ ನೀರು ಕುಡಿಯುವ ಸಲುವಾಗಿ ಬೈಕ್‌ನಲ್ಲಿ ಮನೆಗೆ ತೆರಳಿದ್ದರು. ಈ ವೇಳೆ ತಿರುವಿನಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ.

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಾಹನದ ಹಿಂಬದಿ ಕುಳಿತಿದ್ದ ದೀಪು ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Tags:
error: Content is protected !!