ಮೈಸೂರು

ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ.

ಮೊದಲನೇ ಘಟನೆಯಲ್ಲಿ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಕಡಕೊಳ ನಿವಾಸಿ ನಂಜನಾಯಕ ಎಂಬವರು ಮೃತಪಟ್ಟಿದ್ದಾರೆ. ಬ್ರೆಡ್ ತರಲೆಂದು ಬೇಕರಿಗೆ ಹೋಗಿದ್ದ ವೇಳೆ ಈ ದುರಂತ ನಡೆದಿದೆ.

ಅನಾರೋಗ್ಯಕ್ಕೀಡಾಗಿದ್ದ ನಂಜನಾಯಕ ಅವರು ರಾತ್ರಿ 9 ಗಂಟೆ ವೇಳೆಯಲ್ಲಿ ಬ್ರೆಡ್ ತರಲೆಂದು ಕಡಕೊಳದ ಬೇಕರಿ ಬಳಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ನಂಜನಗೂಡು ಕಡೆಯಿಂದ ಬಂದ ಟಿಟಿ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ.

ಕೂಡಲೇ ಸ್ಥಳೀಯರು ಅವರನ್ನು ಆಂಬುಲೆನ್ಸ್ ಮೂಲಕ ಕೆಆರ್ ಆಸ್ಪತ್ರೆಗೆ ಕರೆತಂದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಈ ಸಂಬಂಧ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡನೇ ಘಟನೆಯಲ್ಲಿ ಸ್ವಯಂ ಅಪಘಾತದಲ್ಲಿ ಮಧ್ಯಪ್ರದೇಶ ಮೂಲದ ರವಿಕಾಂತ್ ಎಂಬವರು ಸಾವನ್ನಪ್ಪಿದ್ದಾರೆ. ಖಾಸಗಿ ಕಾರ್ಖಾನೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು, ಲಿಂಗದೇವರಕೊಪ್ಪಲಿನಲ್ಲಿ ವಾಸವಿದ್ದರು. ಕ್ರಿಕೆಟ್ ಆಡುವ ಸಲುವಾಗಿ ಬೆಳವಾಡಿಯ ಮೈದಾನಕ್ಕೆ ತೆರಳಿದ್ದರು. ನಂತರ ನೀರು ಕುಡಿಯುವ ಸಲುವಾಗಿ ಬೈಕ್‌ನಲ್ಲಿ ಮನೆಗೆ ತೆರಳಿದ್ದರು. ಈ ವೇಳೆ ತಿರುವಿನಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗೆ ಬಿದ್ದಿದ್ದಾರೆ.

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಾಹನದ ಹಿಂಬದಿ ಕುಳಿತಿದ್ದ ದೀಪು ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

2 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

2 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

2 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

2 hours ago

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…

2 hours ago

ಸರ್ವಜನ ಹಿತಕಾರಿ ಬಜೆಟ್

ಆರ್.ಟಿ.ವಿಠ್ಠಲಮೂರ್ತಿ ಸಾಮಾಜಿಕ ನ್ಯಾಯದ ರಥ ಎಳೆಯಲು ಸಿಎಂ ಗರಿಷ್ಟ ಯತ್ನ  ಬೆಂಗಳೂರು: ರಾಜ್ಯದ ಆದಾಯ ಮೂಲಗಳಿಗೆ ಹೊಡೆತ ಬಿದ್ದರೂ ಸಾಮಾಜಿಕ…

2 hours ago