ಟಿ.ನರಸೀಪುರ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ತಲಕಾಡಿನ ನಿಸರ್ಗಧಾಮದಲ್ಲಿ ನಡೆದಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಚಾರ್ವಿ(15), ರಮ್ಯ,(16 ) ಮೃತ ದುರ್ದೈವಿಗಳು. ನೀರಿನಲ್ಲಿ ಮುಳುಗಿ ಗಂಭೀರ ಸ್ಥಿತಿಯಲ್ಲಿರುವ ಸುಚಿತ್ರಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಬೆಂಗಳೂರಿನಿಂದ ಶಾಲೆಯಿಂದ 72 ವಿದ್ಯಾರ್ಥಿಗಳ ತಂಡವು ತಲಕಾಡಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಘಟನೆ ಜರುಗಿದೆ.
ಕಾವೇರಿ ನದಿಯ ನೀರಿನಲ್ಲಿ ಈಜಾಡುವಾಗ ಆಯತಪ್ಪಿ ನೀರಿನಲ್ಲಿ ಮುಳುಗಿರುವ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ.





