Mysore
23
haze

Social Media

ಭಾನುವಾರ, 01 ಫೆಬ್ರವರಿ 2026
Light
Dark

ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣ: ಎಫ್‌ಐಆರ್‌ ದಾಖಲಿಸಿ ಸಿಸಿಬಿಗೆ ವಹಿಸಿದ ಪೊಲೀಸರು

ಮೈಸೂರು: ಕಿಡಿಗೇಡಿಗಳು, ಇಲ್ಲಿನ ಉದಗಿರಿಯ ಪೊಲೀಸ್‌ ಠಾಣೆಗೆ ಕಲ್ಲು ತೂರಾಟ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ ಈ ಪ್ರಕರಣವನ್ನು ತನಿಖೆ ನಡೆಸುವಂತೆ ಸಿಸಿಬಿಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ.

ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮಾ ನಡೆದಿತ್ತು. ಇದರ ಬೆನ್ನಲ್ಲೇ ಉದಯಗಿರಿ ಪೊಲೀಸ್‌ರು ಇದೇ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿ ಸಿಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯ ಕುರಿತು ಉದಯಗಿರಿ ಪೊಲೀಸ್‌ ಠಾಣೆಯ ಪೊಲೀಸರು ಸಿಸಿಟಿವಿ ದೃಶ್ಯದಲ್ಲಿ ಮಾಹಿತಿ ಕಲೆ ಹಾಕಿದ್ದು, ಫೋಟೋ ಆಧಾರಿತವಾಗಿ ಆರೋಪಿಗಳ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.

Tags:
error: Content is protected !!