ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಬ್ ಇನ್ಸಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಉದಯಗಿರಿ ಪೊಲೀಸ್ ಠಾಣೆಯ ಪೊಲೀಸ್‌ರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊಡಿಸಿದ್ದಾರೆ.
ಈ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಲು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್ ಕಾರಣವಾಗಿತ್ತು. ಗಲಭೆ ಪ್ರಕರಣದ ಸಂಬಂಧ ಪೊಲೀಸರು 50ಕ್ಕೂ ಹೆಚ್ಚು ಮಂದಿಯ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಆದರೆ ಈ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಪೊಲೀಸರು ವಿಫಲರಾದ ಆರೋಪ ಹಿನ್ನೆಲೆಯಲ್ಲಿ ಎಸ್‌ಐ ರೂಪೇಶ್ ಹಾಗೂ ಇಬ್ಬರು ಎಸ್‌ಬಿ ಕಾನ್ಸಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.





