ಮೈಸೂರು

ಯುಗಾದಿ : ಅರಮನೆ ಮುಂದೆ ಮೂರು ದಿನ ಸಂಗೀತೋತ್ಸವ

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಮಾರ್ಚ್‌ 30 ರಿಂದ ಮೂರು ದಿನಗಳ ಕಾಲ ಅರಮನೆ ಮುಂಭಾಗ  ಯುಗಾದಿ ಸಂಗೀತೋತ್ಸವವನ್ನು ಆಯೋಜಿಸಲಾಗಿದೆ.

ಮಾರ್ಚ್ 30 ರಂದು ಸಂಜೆ 5:30 ಗಂಟೆಗೆ ಸಂಗೀತೋಯ್ಸವ ಆರಂಭವಾಗಲಿದೆ.

ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಕಾರ್ಯಕ್ರಮದ ವಿದ್ಯುಕ್ತ ಚಾಲನೆ ಮಾಡಲಿದ್ದಾರೆ. ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಅವರು ಆಗಮಿಸಲಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವಿರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ.ಹರೀಶ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಹೆಚ್. ವಿಶ್ವನಾಥ್, ಡಾ. ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ. ಮಾದೇಗೌಡ, ಡಾ. ಯತಿಂದ್ರ ಎಸ್. ಮತ್ತು ವಿವೇಕಾನಂದ ಎಸ್. ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

46 mins ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

50 mins ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

53 mins ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

1 hour ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

1 hour ago