ಮೈಸೂರು: ಜಮೀನಿನಲ್ಲಿ ಶುಂಠಿ ಬೆಳೆ ಕೈಕೊಟ್ಟ ಪರಿಣಾಮ ವಿಷದ ಮಾತ್ರೆ ಸೇವಿಸಿ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ತಾಲ್ಲೂಕಿನ ಧನಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಮಣಿಕಂಠ ಎಂದು ಗುರುತಿಸಲಾಗಿದೆ. ರೈತ ಮಣಿಕಂಠ ಸುಮಾರು ಒಂದೂವರೆ ಎಕರೆ ಜಮೀನಿನಲ್ಲಿ ಶುಂಠಿ ಬೆಳೆ ಹಾಕಿದ್ದರು. ಶುಂಠಿ ಬೆಳೆಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆಯಲ್ಲಿದ್ದ ಅವರಿಗೆ ಬೆಳೆ ಸಂಪೂರ್ಣ ಕೈಕೊಟ್ಟಿದೆ.
ಬ್ಯಾಂಕ್ ಹಾಗೂ ಕೈಸಾಲ ಸೇರಿದಂತೆ ಸುಮಾರು 8 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ ಮಣಿಕಂಠ ಅವರು ಸಾಲಗಾರರ ಕಾಟ ತಾಳಲಾರದೇ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…