ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ನಿನ್ನೆ (ಮಾ.೧೮) ರಂದು ಯಾರು ರಾಜ..? ಎಂದು ಪ್ರಶ್ನಿಸಿದ್ದರು. ಈ ಕುರಿತು ಸ್ವತಃ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ್ ಅವರು, ರಾಜ ಯಾರು ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯೆ ಕೊಡಲಿ ಎಂದು ಯದುವೀರ್ ಮರು ಪ್ರಶ್ನೆ ಮಾಡಿದ್ದಾರೆ.
ನಗರದಲ್ಲಿಂದು ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಯದುವೀರ್ ಮಾತನಾಡಿದರು. ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ-ರಾಣಿ ಎಂಬ ಯಾವುದು ವಿಶೇಷ ಮಹತ್ವ ಇಲ್ಲ. ಎಲ್ಲರೂ ಪ್ರಜೆಗಳೇ ಇಷ್ಟನ್ನು ಮಾತ್ರ ನಾನು ಹೇಳಬಲ್ಲೇ ಎಂದು ಜಾಣ್ಮೆಯ ಉತ್ತರ ನೀಡಿದ್ದಾರೆ.
ಸುತ್ತೂರು ಸ್ವಾಮೀಜಿಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಬೇರೆ ಯಾವ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ದಿನಾಂಕ ಇನ್ನೂ ಎರಡು ಮೂರು ದಿನಗಳಲ್ಲಿ ತೀರ್ಮಾನವಾಗುತ್ತದೆ. ಮೋದಿ ಪ್ರಚಾರಕ್ಕೆ ಬರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…