ಮೈಸೂರು: ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಗೀಳಾಗಿ ಪರಿಣಮಿಸುವ ಮಾದಕ ವಸ್ತುಗಳ ಸೇವನೆಯು ಭಾರತದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಹಿಳೆಯರೇ ಹೆಚ್ಚು ಮಾದಕ ವ್ಯಸನಿಗಳಾಗುತ್ತಿರುವುದು ಶೋಚನೀಯ ಸಂಗತಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳಾದ ಡಾ. ಪಿ.ಸಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಶನಿವಾರ(ಜು.7) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಮೈಸೂರು ಇವರ ಸಹಯೋಗದೊಂದಿಗೆ ಎನ್.ಆರ್. ಮೊಹಲ್ಲಾದ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ “ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ” ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆ ಇಂದು ಸಾಮಾಜಿಕ ಪಿಡುಗಾಗಿ ಬೆಳೆಯುತ್ತಿದೆ. ಇದರಿಂದ ಚಟಕ್ಕೆ ದಾಸನಾಗಿರುವ ವ್ಯಕ್ತಿಗೆ ವೈಯಕ್ತಿಕವಾಗಿ ಮತ್ತು ಕುಟುಂಬದ ಮೇಲೆ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ವೇಗಳನ್ನು ಗಮನಿಸುವುದಾದರೆ 16-17 ವರ್ಷದ ಹದಿಹರೆಯದ ಹುಡುಗ ಮತ್ತು ಹುಡುಗಿಯರು ಹೆಚ್ಚಾಗಿ ಮಾದಕ ವಸ್ತುಗಳ ಚಟಕ್ಕೆ ಒಳಗಾಗಿರುವುದು ಕಂಡುಬರುತ್ತದೆ. ಇದು ಆ ಮಕ್ಕಳ ಭವಿಷ್ಯಕ್ಕೆ ಮಾರಕ ಎಂದು ಎಚ್ಚರಿಸಿದರು.
ಜನರು ಯಾವುದೂ ಒಂದು ಸಣ್ಣ ಕಾರಣಕ್ಕಾಗಿ ಮಾದಕ ವಸ್ತುಗಳನ್ನು ಸೇವಿಸಲು ಶುರುಮಾಡಿ ನಂತರ ಅದಕ್ಕೆ ದಾಸರಾಗುತ್ತಾರೆ. ಮುಂದೆ ಹವ್ಯಾಸ ಬಿಡಬೇಕೆಂದರೂ ಅದು ಕಷ್ಟಸಾಧ್ಯ ಮತ್ತು ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಹೆಚ್ಚಾಗಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಯುವ ಪೀಳಿಗೆಯ ಜನರು ಜೀವಕ್ಕೆ ಮಾರಕವಾಗುವ ಹವ್ಯಾಸವನ್ನೇ ಬಿಡಬೇಕು ಎಂದು ಸಲಹೆ ನೀಡಿದರು.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಜನರಿಗೆ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಸುತ್ತ ಮುತ್ತಲಿನ ಜನರಿಗೂ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಪ್ರತಿನಿತ್ಯ ಹಲವಾರು ಮಾಧ್ಯಮಗಳಲ್ಲಿ ಬಹಳಷ್ಟು ವಿಷಯಗಳನ್ನು ನೋಡುತ್ತೇವೆ. ನಾಗರಿಕ ಸಮಾಜದಲ್ಲಿನ ಕಟ್ಟುಪಾಡುಗಳನ್ನು ಮೀರಿ ಇತ್ತೀಚಿನ ದಿನಗಳಲ್ಲಿ ನಾಗರೀಕರು ವರ್ತಿಸುತ್ತಿದ್ದಾರೆ. ಇದಕ್ಕೆ ಕಾರಣ ಆಲ್ಕೋಹಾಲ್, ಗುಟ್ಕಾ, ತಂಬಾಕು ಇನ್ನಿತರ ಮಾದಕ ವಸ್ತುಗಳ ಸೇವನೆಗೆ ದಾಸರಾಗಿರುವುದು ಎಂದರು.
ಪ್ರತಿಯೊಬ್ಬರೂ ಇದರ ಬಗ್ಗೆ ಎಚ್ಚೆತ್ತುಕೊಂಡು ಆರೋಗ್ಯದ ಬಗ್ಗೆ ಮಾಹಿತಿ ತಿಳಿದುಕೊಂಡು ಅದರ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳಲ್ಲಿ ನೀಡಿರುವ ಮಾಹಿತಿಯನ್ನು ಅಳವಡಿಸಿಕೊಂಡು ನಿಮ್ಮ ಹಂತದಲ್ಲಿಯೇ ನಿಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿ ಮಾದಕ ವಸ್ತುಗಳ ವ್ಯಸನಗಳಿಗೆ ಇದರ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅವರಲ್ಲಿ ಜಾಗೃತಿ ಮೂಡಿಸುವ ಮೂಲಕ ಧನಾತ್ಮಕವಾಗಿ ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಮಾದಕ ವಸ್ತುಗಳ ಸೇವನೆಯ ಬಳಕೆಯನ್ನು ನಿರ್ಮೂಲನೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಬೃಂದಾ, ಸಿ.ಪಿ.ಸಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್, ಮನೋರೋಗ ತಜ್ಞೆ ಡಾ.ಮಾಲಿನಿ, ಲಷ್ಕರ್ ಮೊಹಲ್ಲಾದ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್, ಎನ್‌ಎಸ್‌ಎಸ್‌ನ ಸಂಚಾಲಕರು, ಅಧ್ಯಾಪಕ ವೃಂದದವರು ಹಾಗೂ ವಿಧ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…