ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್
ಮೈಸೂರು : ತೀವ್ರ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿರುವ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯ 2026-27ನೇ ಸಾಲಿಗೆ 53.76 ಕೋಟಿ ರೂ.ಗಳ ವಿತ್ತೀಯ ಕೊರತೆ ಎದುರಿಸುತ್ತಿದೆ.
ಮೈಸೂರು ವಿಶ್ವವಿದ್ಯಾನಿಲಯ ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿಯ ಸಭಾಂಗಣದಲ್ಲಿ ಕುಲಪತಿ ಪ್ರೊ. ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಣ ಮಂಡಳಿ ಸಭೆಯಲ್ಲಿ ವಿವಿಯ ಪ್ರಭಾರ ಹಣಕಾಸು ಅಧಿಕಾರಿ ಪ್ರೊ.ಮಂಜುನಾಥ ಬಜೆಟ್ ಮಂಡಿಸಿದರು.
2026-27ನೇ ಸಾಲಿಗೆ ವಿಶ್ವವಿದ್ಯಾನಿಲಯದ ವೇತನಾನುದಾನ 122.48 ಕೋಟಿ ರೂ., ಪಿಂಚಣಿ ಅನುದಾನ 100 ಕೋಟಿ ರೂ., ಅಭಿವೃದ್ಧಿ ಅನುದಾನದಲ್ಲಿ 10 ಕೋಟಿ ರೂ. ನಿರೀಕ್ಷಿಸಲಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 6.09 ಕೋಟಿ ರೂ. ಅನುದಾನ ನಿರೀಕ್ಷಿಸಲಾಗಿದೆ.
ಆಂತರಿಕ ಸಂಪನ್ಮೂಲಗಳಾದ ಪ್ರವೇಶ, ನೋಂದಣಿ, ಸಂಯೋಜನೆ, ಪರೀಕ್ಷಾ ಚಟುವಟಿಕೆಗಳು ಇನ್ನಿತರೆ ಶುಲ್ಕಗಳಿಂದ ಹಾಗೂ ವಿವಿಯ ವಿವಿಧ ಆಸ್ತಿಗಳಿಂದ ಮತ್ತು ಇತರೆ ಮೂಲಗಳಿಂದ 108.75 ಕೋಟಿ ರೂ. ಆಂತರಿಕ ಆದಾಯ ನಿರೀಕ್ಷಿಸಲಾಗಿದೆ. ನಿರೀಕ್ಷಿತ ಆದಾಯಕ್ಕಿಂತ ಸಿಬ್ಬಂದಿ ವೇತನ, ಪಿಂಚಣಿ ನಿರ್ವಹಣೆ ವೆಚ್ಚ ವೇ ಹೆಚ್ಚಾಗುತ್ತಿದೆ. ಇದರಿಂದಾಗಿ ವಿಶ್ವವಿದ್ಯಾನಿಲಯವು ಕೊರತೆ ಬಜೆಟ್ ಎದುರಿಸುತ್ತಿದೆ ಎಂದರು.
ಒಟ್ಟಾರೆ ವಿವಿಯು 384.28 ಕೋಟಿ ರೂ. ಆದಾಯದ ನಿರೀಕ್ಷೆಯಲ್ಲಿದ್ದರೆ 438.04 ಕೋಟಿ ರೂ. ವೆಚ್ಚವಾಗಲಿದೆ ಎಂದು ಆಯವ್ಯಯ ಅಂದಾಜು ತಯಾರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪಿಂಚಣಿಗೆ 171 ಕೋಟಿ ರೂ.ಬೇಕು
2026-27ನೇ ಸಾಲಿನಲ್ಲಿ ವಿಶ್ವವಿದ್ಯಾನಿಲಯದಿಂದ ನಿವೃತ್ತರಾಗುವ ನೌಕರರುಗಳ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳಿಗಾಗಿ 171.45 ಕೋಟಿ ರೂ.ಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಸರ್ಕಾರ 100 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಇದರಿಂದಾಗಿ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳಿಗೆ 71.45 ಕೋಟಿ ರೂ. ಕೊರತೆ ಎದುರಿಸುವಂತಾಗಿದೆ ಎಂದು ಹೇಳಿದರು.
ಪ್ರಸ್ತುತ ಸುಮಾರು 1,864 ಮಂದಿ ಪಿಂಚಣಿ/ ಕುಟುಂಬ ಪಿಂಚಣಿದಾರರು ಮಾಸಿಕ ಪಿಂಚಣಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. 2026-27ನೇ ಸಾಲಿಗೆ ಪಿಂಚಣಿದಾರರ ಸಂಖ್ಯೆ 1906 ಆಗಲಿದ್ದು, ಪ್ರಸ್ತುತ ಸಾಲಿನಲ್ಲಿ 18 ಬೋಧಕರು ಮತ್ತು 24 ಬೋಧಕೇತರ ಸಿಬ್ಬಂದಿ ನಿವೃತ್ತರಾಗುತ್ತಿದ್ದಾರೆ. ಹೀಗಾಗಿ 171 ಕೋಟಿ ರೂ. ಅಗತ್ಯವಾಗಿದೆ ಎಂದು ವಿವರಿಸಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…