ಮೈಸೂರು

ಮೈಸೂರಿನ ಈ ಗ್ರಾಮದಲ್ಲಿ ಅಸ್ಪೃಶ್ಯತೆ ಜೀವಂತ, ದಲಿತರಿಗಿಲ್ಲ ದೇವಾಲಯ ಪ್ರವೇಶ

ಮೈಸೂರು: ಭಾರತವನ್ನು ಕಾಡುತ್ತಿರುವ ಮೂಲಭೂತ ಸಮಸ್ಯೆಗಳಲ್ಲಿ ಜಾತಿ ವ್ಯವಸ್ಥೆಯು ಒಂದು. ಜಾತಿ ವ್ಯವಸ್ಥೆ ಹಾಗೂ ಅಸ್ಪಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರು, ಇಂದಿಗೂ ಬಹುತೇಕ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಅದೇ ರೀತಿ, ಮೈಸೂರು ತಾಲೂಕಿನ ಕಿರಾಳು ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ.

ಜಿಲ್ಲೆಯ ವರಣಾದ ಕಿರಾಳು ಗ್ರಾಮದ ಶಂಭುಮಹಾಲಿಂಗೇಶ್ವರ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಲು ಅರ್ಚಕರು ಹಾಗೂ ಗ್ರಾಮಸ್ಥರು ಅವಕಾಶ ನೀಡದೇ ಅಸ್ಪೃಶ್ಯತೆ ಆಚರಿಸಿದ್ದಾರೆ. ಈ ಬಗ್ಗೆ ಗ್ರಾಮದ ನವೀನ್‌ ಎಂಬುವವರು ತಹಶೀಲ್ದಾರ್‌ ಮಹೇಶ್ ಕುಮಾರ ಅವರಿಗೆ ದೂರು ನೀಡಿದ್ದಾರೆ.

ಕೂಡಲೇ ಎಚ್ಚೆತ್ತ ತಹಶೀಲ್ದಾರ್‌, ವರುಣಾ ಪಿಎಸ್‌ಐ ಚೇತನ್‌ ಹಾಗೂ ಇತರ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ.

ತಹಶೀಲ್ದಾರ್‌ ಅವರು ಗ್ರಾಮಸ್ಥರ ಮನವೊಲಿಸಿ ನಿರ್ಬಂಧ ಹೇರಿದ್ದ ನವೀನ್ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಿದರು. ಅಧಿಕಾರಿಗಳ ಸಮ್ಮುಖದಲ್ಲೇ ನವೀನ್‌ ದೇವಸ್ಥಾನ ಪ್ರವೇಶಿಸಿ ಪೂಜೆ ಸಲ್ಲಿಸಿದರು. ಬಳಿಕ ಅಧಿಕಾರಿಗಳು ದೇವಸ್ಥಾನದ ಆವರಣದಲ್ಲೇ ಸಭೆ ಕರೆದು ಅಸ್ಪೃಶ್ಯತೆ ಆಚರಿಸದಂತೆ ಜಾಗೃತಿ ಮೂಡಿಸುವ ಮೂಲಕ ಗ್ರಾಮಸ್ಥರಿಗೆ ವಾರ್ನಿಂಗ್‌ ನೀಡಿದ್ದಾರೆ.

ತಹಶೀಲ್ದಾರ್‌ ಮಹೇಶ್‌ ಕುಮಾರ್‌, ಉಪ ತಹಶೀಲ್ದಾರ್‌ ಲತಾ ಶರಣಮ್ಮ, ಗ್ರಾಮ ಆಡಳಿತಾಧಿಕಾರಿ ಕೀರ್ತಿ ಕುಮಾರ್‌ ಮತ್ತು ಅಬ್ದುಲ್‌ ರಶೀದ್‌ ಗ್ರಾಮಕ್ಕೆ ತೆರಳಿ ಅಸ್ಪೃಶ್ಯತೆಗೆ ಕಡಿವಾಣ ಹಾಕಿದ್ದಾರೆ.

ಆಧುನಿಕ ಪ್ರಜಾಪ್ರಭುತ್ವ ರಾಷ್ಟ್ರ ಎನಿಸಿಕೊಳ್ಳುವ ಭಾರತದಲ್ಲಿ ಈಗಲೂ ಅಸ್ಪೃಶ್ಯತೆ ಆಚರಣೆ ಕಂಡುಬರುವುದು ಶೋಚನಿಯ. ಅದರಲ್ಲೂ ಮೌಡ್ಯಾರಚಣೆ ಹಾಗೂ ಅನಿಷ್ಠ ಪದ್ಧತಿಗಳ ವಿರುದ್ಧ  ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್‌.ಸಿ ಮಹದೇವಪ್ಪನವರ ತಾಲೂಕಿನಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವುದು ವಿಪರ್ಯಾಸವೇ ಸರಿ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

7 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

10 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

10 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

10 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

10 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

10 hours ago