ಬೆಂಗಳೂರು: ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರಗಳನ್ನು ಗೆಲ್ಲಲು, ಏಪ್ರಿಲ್ 12ರಿಂದ ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಏಪ್ರಿಲ್ 12ರಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಜಾಧ್ವನಿ– 2 ಸಮಾವೇಶಗಳಲ್ಲಿ ಭಾಗವಹಿಸಿ, 13ರಂದು ಮೈಸೂರು ನಗರ, ಹುಣಸೂರು, ಪಿರಿಯಾಪಟ್ಟಣದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ತಮ್ಮ ತವರು ಜಿಲ್ಲೆಯ ಕ್ಷೇತ್ರ ಗೆಲ್ಲುವ ಹಠಕ್ಕೆ ಬಿದ್ದಿರುವ ಸಿದ್ದರಾಮಯ್ಯ, ಪಕ್ಷದ ಅಭ್ಯರ್ಥಿಗಳಾದ ಎಂ. ಲಕ್ಷ್ಮಣ್ ಮತ್ತು ಸುನಿಲ್ ಬೋಸ್ ಪರ ಮತ ಯಾಚಿಸಲಿದ್ದಾರೆ. ನಂತರ ಪಕ್ಷದ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಿ ಕಾರ್ಯತಂತ್ರ ರೂಪಿಸಲಿದ್ದಾರೆ.
ಈ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಮತ್ತೊಂದು ಸುತ್ತಿನ ಪ್ರಚಾರದ ಮೂಲಕ ಮತದಾರನ್ನು ಸೆಳೆಯಲು ಮುಂದಾಗಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…