ಮೈಸೂರು

Competitive Exam; ಸ್ಪರ್ಧಾತ್ಮಕ ಪರೀಕ್ಷೆಗೆ ಕಠಿಣ ತಯಾರಿ ಮುಖ್ಯ ; ಡಿಐಜಿ ಬೋರಲಿಂಗಯ್ಯ

ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆ (Competitive Exams) ಎದುರಿಸಲು ಕಠಿಣ ತಯಾರಿ ಮುಖ್ಯ ಎಂದು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಎಂ.ಬಿ ಬೋರಲಿಂಗಯ್ಯ ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ 50 ದಿನಗಳ ಐಎಎಸ್‌ ಹಾಗೂ ಕೆಎಎಸ್ ಪರೀಕ್ಷಾ ತರಬೇತಿಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಉದ್ಯೋಗ ಮಾರುಕಟ್ಟೆಯಲ್ಲೀಗ ಸ್ಪರ್ಧೆ ಹೆಚ್ಚಿದೆ. ಯಾವುದೇ ಜಾಬ್ ನೋಟಿಫಿಕೇಷನ್ ಪ್ರಕಟವಾಗಲಿ. ಇರುವುದು ಕೆಲವೇ ಹುದ್ದೆಗಳಾಗಿದ್ದರೂ ಸಾವಿರ, ಲಕ್ಷ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುತ್ತಾರೆ. ಸರ್ಕಾರಿ ನೌಕರಿಗಿರುವ ಸೆಳೆತನ ಅಂತದ್ದು. ಕಠಿಣ ಪರಿಶ್ರಮವಿದ್ದರೆ ಇಂತಹ ಉದ್ಯೋಗಗಳನ್ನು ನೀವು ಪಡೆಯಬಹುದು ಎಂದು‌ ಕಿವಿಮಾತು ಹೇಳಿದರು.

ನಾನು ಕೂಡ ಹಳ್ಳಿಯಲ್ಲಿಯೇ ಹುಟ್ಟಿ ಬೆಳೆದು ಮೈಸೂರು ಮೆಡಿಕಲ್ ಕಾಲೇಜಿನಲ್ಲಿ‌ ಓದಿ ಯುಪಿಎಸ್ಸಿ ಪರೀಕ್ಷೆ ತಯಾರಿಗೆ ದೆಹಲಿಗೆ ಹೋಗಿದ್ದೆ. ಇಲ್ಲಿ ಬಹುತೇಕರು ಗ್ರಾಮೀಣ ಭಾಗದವರೇ ಇದ್ದೀರಿ. ಶ್ರಮ ಪಟ್ಟು ಓದಿ. ಪ್ರಸ್ತುತ ಪರೀಕ್ಷೆ ತಯಾರಿಗೆ ದೆಹಲಿಗೆ ಹೋಗಬೇಕೆಂದಿಲ್ಲ. ಮೈಸೂರಿನ ಕೆಎಸ್ಒಯು ನಡೆಸುತ್ತಿರುವ ತರಬೇತಿಯು ಅತ್ಯುತ್ತಮವಾಗಿದೆ ಎಂದರು.

ಹಾರ್ಡ್ ವರ್ಕ್ ಮತ್ತು ಪರಿಶ್ರಮದ ಜೊತೆಗೆ ಓದಿನಲ್ಲಿ ತಯಾರಿ ಇರಲಿ. ನಿದ್ರೆಯು ಮುಖ್ಯ. ನಿದ್ದೆಗೆಟ್ಟಿ ಓದುವುದು ಬೇಡ. ಎಲ್ಲದಕ್ಕೂ ಸಮಯ ಪಾಲನೆ ಇದ್ದರೆ ಒಳಿತು. ತಯಾರಿ ಸಮಯದಲ್ಲಿ ವಿದ್ಯಾರ್ಥಿಗಳು ಗುಂಪು ರಚಿಸಿಕೊಂಡು ಆಯ್ಕೆವಾರು ವಿಷಯಗಳನ್ನು ಚರ್ಚಿಸಿ. ಸಾಧ್ಯವಾದಷ್ಟು ಸಾಮಾಜಿಕ ಜಾಲತಾಣದ ಗೀಳಿನಿಂದ‌‌ ದೂರವಿದ್ದು, ದೈನಂದಿನ ದೈಹಿಕ ಚಟುವಟಿಕೆ ಕಡೆಗೆ ಗಮನ ಹರಿಸಿ ಎಂದರು.

ಪರೀಕ್ಷಾ ಸಿದ್ಧತೆ ಕುರಿತು ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಜಿ.ಎಸ್ ಸೋಮಶೇಖರ್, ಪರೀಕ್ಷೆ ಎದುರಿಸುವುದಕ್ಕೆ ದೃಢ ಮನಸ್ಸು ಇರಬೇಕು. ಪರೀಕ್ಷೆ ಯಶಸ್ಸಿನ ತಂತ್ರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು, ಆತ್ಮವಿಶ್ವಾಸ, ಸಮಯ ಪಾಲನೆ, ನೆನಪಿನ ಶಕ್ತಿ, ಪರೀಕ್ಷೆ ಬರೆಯುವ ತಂತ್ರ ಕಲಿತರೆ ಗೆಲುವು ನಿಮ್ಮದೆ ಎಂದು ಹೇಳಿದರು.

ನಾವು ಸಾವಿರ ಜನರಿಗಿನ್ನ ಮುಂದೆ ಇದ್ದೀವಿ ಎನ್ನುವ ಭರವಸೆ ಇರಲಿ. ಪರೀಕ್ಷೆ ಬರೆದ ಮೊದಲ ಬಾರಿಯಲ್ಲೇ ಆಯ್ಕೆಯಾಗಬೇಕು ಎನ್ನುವ ಛಲ ಇರಲಿ ಆದರೆ ಆಗದೆ ಇದ್ದಾಗ ಛಲ ಬಿಡದೆ ಮತ್ತೆ ಮತ್ತೆ ಪ್ರಯತ್ನಿಸಿ ಎಂದರು.

ಯುಪಿಎಸ್ಸಿ ಕೆಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿದರೆ ಇನ್ನೀತರ ಬೇರೆ ಸ್ಪರ್ಧಾತ್ಮಕ ಪರೀಕ್ಷೆಗೂ ಕೂಡ ಅನುಕೂಲವಾಗಲಿದೆ. ದಿನದ 24 ಗಂಟೆಯನ್ನು ವಿಂಗಡಿಸಿಕೊಂಡು ಸಮಯ ಪರಿಪಾಲಿಸಿ ಎಂದು ಹೇಳಿದರು.

ಪರೀಕ್ಷೆ ಬಗ್ಗೆ ತಿಳಿವಳಿಕೆ ಇರಬೇಕು. ಪಠ್ಯಕ್ರಮ, ಪರೀಕ್ಷೆ ಮಾದರಿ, ಹಿಂದಿನ ವರ್ಷದ ಪ್ರಶ್ನೆ ಪ್ರತ್ರಿಕೆಗಳ ಅಧ್ಯಯನದ ಜೊತೆಗೆ ಪ್ರತಿನಿತ್ಯ ದಿನಪತ್ರಿಕೆ, ನಿಮ್ಮಿಷ್ಟದ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರು ಮಾತನಾಡಿ, ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟು ಓದಬೇಕು. ನಿಮ್ಮ ನಿರಂತರ ಪ್ರಯತ್ನದಿಂದ ಎಲ್ಲವೂ ಸಾಧ್ಯ. ಶಿಕ್ಷಣ ಉದ್ಯೋಗದ ಜೊತೆಗೆ ಶಿಸ್ತನ್ನು ಕಲಿಸುತ್ತದೆ ಎಂದು ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಷ್ಟ ಪಟ್ಟಿ ಓದಿ ವಿಶ್ವ ಜ್ಞಾನಿ ಆಗಿದ್ದಾರೆ. ಜಗತ್ತು ಇಂದು ಅವರ ಜ್ಞಾನಕ್ಕೆ ಎದುರುತ್ತಿದೆ. ನಿರಂತರ ಪರಿಶ್ರಮದಿಂದ ಮಾತ್ರ‌‌ ಇದೆಲ್ಲಾ ಸಾಧ್ಯ. ಹೀಗಾಗಿ ನಿಮ್ಮ ಓದು ನಿರಂತರವಾಗಿರಲಿ ಎಂದು ತಿಳಿಸಿದರು.

ಕುಲಸಚಿವ ಪ್ರೊ.ಕೆ.ಬಿ ಪ್ರವೀಣ ಅವರು ಮಾತನಾಡಿ, ವಿದ್ಯಾರ್ಥಿಗಳು ಹಾರ್ಡ್ ವರ್ಕ್ ಜೊತೆಗೆ ಸ್ಮಾರ್ಟ ವರ್ಕ್ ಮಾಡಬೇಕು..ಆಸೆ ಪಟ್ಟು ಓದಿ. ವಿವಿಯ ಆವರಣದಲ್ಲಿ ಎಲ್ಲಾ ರೀತಿಯ ಸೌಕರ್ಯಗಳಿವೆ. ಇವುಗಳನ್ನು ಉಪಯೋಗಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಸ್ಪರ್ಧಾತ್ಮಕ ಪರೀಕ್ಚೆಯ ಎದುರಿಸುವವರು ಪ್ರಚಲಿತ ವಿದ್ಯಮಾನಗಳು, ಕನ್ನಡ ಸಾಹಿತ್ಯ, ಇತಿಹಾಸ, ಸಂವಿಧಾನದ ಕುರಿತು ಓದಬೇಕು ಎಂದರು.

ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಹೆಚ್.ವಿಶ್ವನಾಥ್, ಹಣಕಾಸು ಅಧಿಕಾರಿ ಪ್ರೊ.ನಿರಂಜನ್‌ ರಾಜ್‌, ಅಧ್ಯಯನ ಕೇಂದ್ರದ ಡೀನ್‌ ಪ್ರೊ.ರಾಮನಾಥಂ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್‌ ಹೊನ್ನೂರು, ಗಣೇಶ್‌ ಕೆ.ಜಿ ಕೊಪ್ಪಲು ಇದ್ದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

13 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

14 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago