ಮೈಸೂರು

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ ಮೈಸೂರು ವಿ.ವಿ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದವತಿಯಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ಗುರುವಾರ ಮಾನಸಗಂಗೋತ್ರಿಯ ಕ್ಲಾಕ್ ಟವರ್‌ನ ಬಳಿ ಜಮಾವಣೆಗೊಂಡ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಯುಜಿಸಿಯ ಹೊಸ ನಿಯಮಾವಳಿಯನ್ನು ಬೆಂಬಲಿಸಿ, ಜಾರಿ ಮಾಡುವಂತೆ ಘೋಷಣೆ ಕೂಗಿದರು.

ಇಂದಿನ ಎಐ ಕಾಲದಲ್ಲೂ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ನಾನಾ ಸ್ವರೂಪದ ಶೋಷಣೆಯನ್ನು ತಡೆಗಟ್ಟಲು ಯುಜಿಸಿ ತನ್ನ ವ್ಯಾಪ್ತಿಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಇದಕ್ಕೆ ಕೆಲವು ಸಂಘಟನೆಗಳವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿರೋಧ ಯಾಕೆ ಎಂದು ಪ್ರಶ್ನಿಸಿದರು.

ಹಾಗಾದರೆ ಕ್ಯಾಂಪಸ್‌ಗಳಲ್ಲಿ ಶೋಷಣೆ ಇಲ್ಲವೇ? ರೋಹಿತ್ ವೇಮುಲ ಆತ್ಮಹತ್ಯೆಗೆ ಕಾರಣ ಏನು? ಅರ್ಟಿಕಲ್ 17 ಇದ್ದರೂ ಅಸ್ಪೃಶ್ಯತೆ ಇಲ್ಲವೇ? ಈ ನಿಯಮಾವಳಿಯನ್ನು ವಿರೋಧಿಸಲು ನ್ಯಾಯಯುತ ಕಾರಣ ಏನು? ಎಂದು ಪ್ರಶ್ನಿಸಿದರು.

ಕ್ಯಾಂಪಸ್‌ಗಳು ಸಮಾನತೆ ಬಿತ್ತುವ ಕೇಂದ್ರಗಳಾಗಬೇಕು. ಶೋಷಣೆ ರಹಿತವಾಗಿರಬೇಕು. ಇದು ಕಲಿತ ಶಿಕ್ಷಣಕ್ಕೆ ಮೌಲ್ಯ ಬರುತ್ತದೆ. ಭವಿಷ್ಯದ ಸ್ವಸ್ಥ ಸಮಾಜಕ್ಕೆ ಕಾರಣವಾಗುತ್ತದೆ. ಸಮಾನತೆಯ ಭಾರತ ನನಸಾಗಲು ಈ ನಿಯಮಾವಳಿಗಳು ಕಾರಣ ಆಗುತ್ತದೆ ಎಂದು ಹೇಳಿದರು.

ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ, ಗೌರವಾಧ್ಯಕ್ಷ ಕಲ್ಲಹಳ್ಳಿ ಕುಮಾರ್, ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ, ಕಾರ್ಯಾಧ್ಯಕ್ಷ ರೋಹನ್ ಹೊಂಗನೂರು, ಸದಸ್ಯರಾದ ಮಾದೇಶ್ ಸೀಗಿ, ಕಿರಣ್, ಡಾ. ಪ್ರತಾಪ್ ಕವಲಂದೆ, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಗಜೇಂದ್ರ ಚಿನ್ನಸ್ವಾಮಿ, ಒಕ್ಕೂಟದ ಗೌರವಾಧ್ಯಕ್ಷ ಶಿವು ಕೋಟೆ, ಕಾರ್ಯದರ್ಶಿ ಗೌತಮ್,ಒಕ್ಕೂಟದ ಸದಸ್ಯರಾದ ಪ್ರವೀಣ್, ಕಿಶೋರ್, ಮಹಾದೇವಸ್ವಾಮಿ, ಅಪ್ಪು, ಅಭಿ, ಸಿದ್ದರಾಜು, ಮನೋಜ್, ಸುಭಾಷ್, ಸಚಿನ್ ಬಸವರಾಜು, ನವೀನ್ ಕೋಳೂರು, ಅಭಿಜಿತ್ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

2 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

2 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

3 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

3 hours ago