ಮೈಸೂರು

ಉತ್ತಮ ಕೃಷಿಗೆ ಜೈವಿಕ ಗೊಬ್ಬರ ಬಳಸಿ : ತೋಟಗಾರಿಕೆ ವಿ.ವಿ ಕುಲಪತಿ ವಿಷ್ಣವರ್ಧನ ಸಲಹೆ

ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಮುಂದಿನ ಪೀಳಿಗೆಗೆ ಉತ್ತಮ ಕೃಷಿ ಭೂಮಿ ಹಾಗೂ ಉತ್ತಮ ಪರಿಸರವನ್ನು ನೀಡಬಹುದು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ವಿಷ್ಣವರ್ಧನ ಅವರು ಅಭಿಪ್ರಾಯಪಟ್ಟರು.

ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಮಹಾವಿದ್ಯಾನಿಲಯ ಮತ್ತು ಆಕಾಶವಾಣಿ ವತಿಯಿಂದ ಸೋಮವಾರ ಡಾ. ಎಂ. ಹೆಚ್. ಮರೀಗೌಡ ಸಭಾಂಗಣ, ಕರ್ಜನ್ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದ “ಹಣ್ಣು-ಹೊನ್ನು ” ಬಾನುಲಿ ಸರಣಿಯಲ್ಲಿ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿ ಭೂಮಿಯನ್ನು ಬೇರೆ ಬೇರೆ ಉದ್ಯಮಗಳಿಗೆ ಅತಿಯಾಗಿ ಬಳಸಿಕೊಳ್ಳುತ್ತಿದ್ದು ಪ್ರತಿ ವರ್ಷ ವು ಕೃಷಿ ಭೂಮಿ ವಿಸ್ತೀರ್ಣ ಕಡಿಮೆಯಾಗುತ್ತಿದೆ. ಇಂದಿನ ಯುವಕರು ಕೃಷಿ ಭೂಮಿ ಇದ್ದರು ಪಟ್ಟಣದ ಕಡೆಗೆ ಮುಖಮಾಡಿದ್ದಾರೆ ಎಂದು ಬೇಸರವನ್ನು ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಅತೀ ಹೆಚ್ಚು ತೋಟಗಾರಿಕೆಯಲ್ಲಿ ತೆಂಗು ಬೆಳೆಯನ್ನು ಬೆಳೆಯಲು ಮುಂದಾಗಿದೆ. ಇದೇ ರೀತಿ ತೋಟಗಾರಿಕೆಯಲ್ಲಿ ಲಾಭದಾಯಕವಾದ ಹಲವಾರು ಬೆಳೆಗಳಿವೆ ರೈತರು ತೋಟಗಾರಿಕೆ ಬೆಳವಣಿಗೆಯನ್ನು ಹೆಚ್ಚು ಮಾಡಬೇಕು.ಮಿಶ್ರ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಆದ ಡಾ. ಹಂಚಿನಮನಿ ಅವರು ಮಾತನಾಡಿ ವಿದೇಶಗಳಲ್ಲಿ ಬೆಳೆಯಲಾಗದ ಹಲವು ಕೃಷಿ ಉತ್ಪನ್ನ ಗಳನ್ನು ಭಾರದಲ್ಲಿ ಬೆಳೆಯಬಹುದು. ಭಾರತದಲ್ಲಿ ವೈವಿಧ್ಯಮ ಕೃಷಿ ಉತ್ಪನ್ನಗಳನ್ನು ಬೆಳೆಯುವ ದೇಶ. ವಿದೇಶದ ಮಾರುಕಟ್ಟೆಗಳಲ್ಲಿ ಭಾರತದ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಇರುತ್ತದೆ. ಹೊರ ದೇಶಕ್ಕೆ ರಫ್ತು ಮಾಡುವ ಗುಣಮಟ್ಟವಿರುವ ಬೆಳೆಗಳನ್ನು ಬೆಳೆಯಿರಿ.
ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ಭಾರತದಲ್ಲಿ ವೈವಿಧ್ಯಮಯವಾದಂತ ಕೃಷಿ ಉತ್ಪನ್ನ ಗಳನ್ನು ಬೆಳೆಯಲಾಗುತ್ತಿದೆ. ರೈತರು ಬೇಡಿಕೆ ಇರುವ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು. ಮಣ್ಣಿನ ಗುಣಮಟ್ಟವನ್ನು ಹೆಚ್ಚಿಸಿ ಸಂರಕ್ಷಿಸುವ ಕಡೆ ಚಿಂತಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ್ ಅಂಗಡಿ ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರು ಎನ್. ಕೇಶವಮೂರ್ತಿ ಹಾಗೂ ರೈತರು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

8 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

11 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

11 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

12 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

12 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

12 hours ago