ಮೈಸೂರು

ಬೆಳ್ಳಿ ರಥದಲ್ಲಿ ಅರಮನೆಗೆ ಬಂತು ಉತ್ಸವ ಮೂರ್ತಿ!

 ಮೈಸೂರು :ಸಾಂಸ್ಕೃತಿಕ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಮೇಳೈಸಿದ್ದು, ಚಾಮುಂಡಿ ಬೆಟ್ಟದಿಂದ ಅರಮನೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ತರಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಬೆಳ್ಳಿ ರಥದಲ್ಲಿ ವಿರಾಜಮಾನವಾದ ಚಾಮುಂಡಿ ದೇವಿಯ ಉತ್ಸವ ಮೂರ್ತಿಯನ್ನು ಮಾರ್ಗದಲ್ಲಿ ಸಾವಿರಾರು ಜನರು ಕಣ್ತುಂಬಿಕೊಂಡರು. ಚಾಮುಂಡಿ ಬೆಟ್ಟದಿಂದ ಭಕ್ತರ ಹರ್ಷೋದ್ಘಾರಗಳ ನಡುವೆ ಉತ್ಸವ ಮೂರ್ತಿ ಅರಮನೆಗೆ ಆಗಮನ‌. ಅರಮನೆಗೆ ಆಗಮಿಸುವಾಗ ಮಾರ್ಗಮಧ್ಯೆ ಅಲ್ಲಲ್ಲಿ ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. ಇನ್ನು, ಅರಮನೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಸ್ವಾಗತಕ್ಕೆ ಬಂದ ಗಜಪಡೆ ಆನೆಗಳಾದ ಅರ್ಜುನ ಮತ್ತು ವಿಜಯ ಸ್ವಾಗತಿಸಿದವು.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

12 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago