ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಅದ್ಧೂರಿಯಾಗಿ ನೆರವೇರಿದವು.
ಏಕಾದಶಿಯ ಪ್ರಯುಕ್ತ ದೇವಾಲಯಗಳಲ್ಲಿ ಬೆಳಿಗ್ಗೆಯೇ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಇಡೀ ದೇವಾಲಯವನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.
ಬೆಳಗಿನ ಜಾವ 5 ಗಂಟೆಗೆ ಪ್ರಮುಖ ಆಕರ್ಷಣೆಯಾದ ಸ್ವರ್ಗದ ಬಾಗಿಲು ಪ್ರವೇಶ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡದು ಪುನೀತರಾದರು.





