ಮೈಸೂರು

ಏಪ್ರಿಲ್‌ 7 ರಂದು ವೈರಮುಡಿ ಉತ್ಸವ ; ಸಿದ್ಧತೆಗೆ ಸಚಿವರ ಸೂಚನೆ

ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್ 2 ರಿಂದ 14 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಏಪ್ರಿಲ್ 7 ರಂದು ವೈರಮುಡಿ ಉತ್ಸವದಲ್ಲಿ ನಡೆಯಲಿದೆ. ಅಂದು ಲಕ್ಷಂತರ ಮಂದಿ ಭಾಗವಹಿಸಲಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೇಸಿಗೆ ಬಿಸಿಲಿನ ತಾಪ ಹೆಚ್ಚಿದ್ದು, ಭಕ್ತಾಧಿಗಳಿಗೆ ಮುಖ್ಯವಾಗಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.

ಕುಡಿಯುವ ನೀರು, ದಸೋಹ ಭವನದಲ್ಲಿ ಆಹಾರ ವಿತರಣೆ ಹಾಗೂ ಪ್ರಸಾದ ವಿತರಣೆ ಭಾಗಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಪರೀಕ್ಷೆಗೆ ಒಳಪಡಿಸಿದ ನಂತರವೇ ವಿತರಣೆಯಾಗಬೇಕು. ಮೇಲುಕೋಟೆಗೆ ವಿವಿಧ ಭಾಗಗಳಿಂದ ಸಂಪರ್ಕಿಸುವ ರಸ್ತೆಗಳ ದುರಸ್ತಿ ಕೆಲಸಗಳು ವೇಗವಾಗಿ ನಡೆಸಿ ಪೂರ್ಣಗೊಳಿಸಬೇಕು. ವಾಹನ ನಿಲುಗಡೆ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಹೇಳಿದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಕುಡಿಯುವ ನೀರಿನ ಟ್ಯಾಂಕರ್ ದೇವಸ್ಥಾನದ ಸುತ್ತಲೂ ,ಕಲ್ಯಾಣಿ, ಪಾರ್ಕಿಂಗ್ ಸ್ಥಳ ಸೇರಿದಂತೆ ಜನಸಂದಣಿ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆಯಾಗಬೇಕು ಭಕ್ತಾಧಿಗಳಿಗೆ‌ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ  ಎಂದು ಸಲಹೆ ನೀಡಿದರು.

ವೈರಮುಡಿ ಉತ್ಸವದಲ್ಲಿ ಭಾಗವಹಿಸುವ ಭಕ್ತಾಧಿಗಳಿಗೆ ದಸೋಹ ಭವನ ಪ್ರಾರಂಭವಾಗಿರುವ ಬಗ್ಗೆ ಮಾಹಿತಿ‌ ನೀಡಲು ದೇವಸ್ಥಾನದ ಸುತ್ತಲೂ ಸೂಚನಾ ಫಲಕಗಳನ್ನು ಅಳವಡಿಸಿ, ದಸೋಹ ಭವನದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು‌. ದಾಸೋಹಕ್ಕೆ ಬೇಕಿರುವ ಆಹಾರ ಸಾಮಗ್ರಿಗಳ ದಾಸ್ತಾನು ಆಗಬೇಕು ಎಂದರು.

ದೇವಸ್ಥಾನ ಸುತ್ತ ಹೆಚ್ಚಿನ ಟ್ರನ್ಸ್ ಪರ್ಮರ್ ಬೇಕಿದ್ದಲ್ಲಿ ವ್ಯವಸ್ಥೆ ಮಾಡಿಕೊಳ್ಳಿ, ಅಗತ್ಯವಿರುವ ಕಡೆ ಹೆಚ್ಚಿನ ವಿದ್ಯುತ್ ‌ದೀಪಗಳ ವ್ಯವಸ್ಥೆಯಾಗಬೇಕು‌. ಕಲ್ಯಾಣಿಗಳ ಸ್ವಚ್ಛತೆಯನ್ನು ಕೈಗೊಳ್ಳಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ  ಮಾತನಾಡಿ, ಈ ಬಾರಿ 19 ಲಕ್ಷ ರೂ ವೆಚ್ಚದಲ್ಲಿ ಶಾಶ್ವತವಾಗಿ ಸಿ.ಸಿ.ಟಿ ವಿ ಅಳವಡಿಸಲಾಗುವುದು. ಇದನ್ನು ವೀಕ್ಷಿಸಲು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದರು.

ಕಲ್ಯಾಣಿಗಳ ಬಳಿ ನುರಿತ ಈಜುಗಾರರನ್ನು ನೇಮಿಸಬೇಕು. ಕಲ್ಯಾಣಿ ಯ ಹತ್ತಿರ ವಿದ್ಯುತ್ ದೀಪಗಳು ಹಾಗೂ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಾಯಿಸಲು ಶೆಡ್ ಗಳ ನಿರ್ಮಾಣವಾಗಬೇಕು ಎಂದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ,ಪಾಂಡವಪುರ ‌ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ‌ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

3 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

3 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

4 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

4 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

5 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 hours ago