ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏಪ್ರಿಲ್ 2 ರಿಂದ 14 ರವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದೆ. ಏಪ್ರಿಲ್ 7 ರಂದು ವೈರಮುಡಿ ಉತ್ಸವದಲ್ಲಿ ನಡೆಯಲಿದೆ. ಅಂದು ಲಕ್ಷಂತರ ಮಂದಿ ಭಾಗವಹಿಸಲಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೇಸಿಗೆ ಬಿಸಿಲಿನ ತಾಪ ಹೆಚ್ಚಿದ್ದು, ಭಕ್ತಾಧಿಗಳಿಗೆ ಮುಖ್ಯವಾಗಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದರು.
ಕುಡಿಯುವ ನೀರು, ದಸೋಹ ಭವನದಲ್ಲಿ ಆಹಾರ ವಿತರಣೆ ಹಾಗೂ ಪ್ರಸಾದ ವಿತರಣೆ ಭಾಗಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಪರೀಕ್ಷೆಗೆ ಒಳಪಡಿಸಿದ ನಂತರವೇ ವಿತರಣೆಯಾಗಬೇಕು. ಮೇಲುಕೋಟೆಗೆ ವಿವಿಧ ಭಾಗಗಳಿಂದ ಸಂಪರ್ಕಿಸುವ ರಸ್ತೆಗಳ ದುರಸ್ತಿ ಕೆಲಸಗಳು ವೇಗವಾಗಿ ನಡೆಸಿ ಪೂರ್ಣಗೊಳಿಸಬೇಕು. ವಾಹನ ನಿಲುಗಡೆ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಹೇಳಿದರು.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಕುಡಿಯುವ ನೀರಿನ ಟ್ಯಾಂಕರ್ ದೇವಸ್ಥಾನದ ಸುತ್ತಲೂ ,ಕಲ್ಯಾಣಿ, ಪಾರ್ಕಿಂಗ್ ಸ್ಥಳ ಸೇರಿದಂತೆ ಜನಸಂದಣಿ ಇರುವ ಸ್ಥಳಗಳಲ್ಲಿ ಟ್ಯಾಂಕರ್ ವ್ಯವಸ್ಥೆಯಾಗಬೇಕು ಭಕ್ತಾಧಿಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.
ವೈರಮುಡಿ ಉತ್ಸವದಲ್ಲಿ ಭಾಗವಹಿಸುವ ಭಕ್ತಾಧಿಗಳಿಗೆ ದಸೋಹ ಭವನ ಪ್ರಾರಂಭವಾಗಿರುವ ಬಗ್ಗೆ ಮಾಹಿತಿ ನೀಡಲು ದೇವಸ್ಥಾನದ ಸುತ್ತಲೂ ಸೂಚನಾ ಫಲಕಗಳನ್ನು ಅಳವಡಿಸಿ, ದಸೋಹ ಭವನದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು. ದಾಸೋಹಕ್ಕೆ ಬೇಕಿರುವ ಆಹಾರ ಸಾಮಗ್ರಿಗಳ ದಾಸ್ತಾನು ಆಗಬೇಕು ಎಂದರು.
ದೇವಸ್ಥಾನ ಸುತ್ತ ಹೆಚ್ಚಿನ ಟ್ರನ್ಸ್ ಪರ್ಮರ್ ಬೇಕಿದ್ದಲ್ಲಿ ವ್ಯವಸ್ಥೆ ಮಾಡಿಕೊಳ್ಳಿ, ಅಗತ್ಯವಿರುವ ಕಡೆ ಹೆಚ್ಚಿನ ವಿದ್ಯುತ್ ದೀಪಗಳ ವ್ಯವಸ್ಥೆಯಾಗಬೇಕು. ಕಲ್ಯಾಣಿಗಳ ಸ್ವಚ್ಛತೆಯನ್ನು ಕೈಗೊಳ್ಳಿ ಎಂದರು.
ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ಈ ಬಾರಿ 19 ಲಕ್ಷ ರೂ ವೆಚ್ಚದಲ್ಲಿ ಶಾಶ್ವತವಾಗಿ ಸಿ.ಸಿ.ಟಿ ವಿ ಅಳವಡಿಸಲಾಗುವುದು. ಇದನ್ನು ವೀಕ್ಷಿಸಲು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದರು.
ಕಲ್ಯಾಣಿಗಳ ಬಳಿ ನುರಿತ ಈಜುಗಾರರನ್ನು ನೇಮಿಸಬೇಕು. ಕಲ್ಯಾಣಿ ಯ ಹತ್ತಿರ ವಿದ್ಯುತ್ ದೀಪಗಳು ಹಾಗೂ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಾಯಿಸಲು ಶೆಡ್ ಗಳ ನಿರ್ಮಾಣವಾಗಬೇಕು ಎಂದರು.
ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ,ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…
ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…