ಮೈಸೂರು: ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನು ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.
ಮೈಸೂರು ಮುಡಾದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ಸಿಎಂ ಮೂಗಿನಡಿ ಸಾವಿರಾರು ಕೋಟಿ ಬೆಲೆ ಬಾಳುವ ಮುಡಾ ಆಸ್ತಿ ಕಳ್ಳರ ಪಾಲಾಗಿದೆ. 69ನೇ ಇಸವಿಯಲ್ಲಿ ಭೂಮಿ ಕಳೆದುಕೊಂಡವರು ಇವತ್ತಿಗೆ ಜ್ಞಾನೋದಯವಾಗಿ ಅರ್ಜಿ ಕೊಟ್ಟಿದ್ದಾರಂತೆ. ಮುಡಾದವರು ಲಕ್ಷ ಲಕ್ಷ ಅಡಿಯನ್ನು ಬಿಟ್ಟು ಕೊಟ್ಟಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಗಿದೆ ಎಂಬುದರ ಬಗ್ಗೆ ಬಿಜೆಪಿ ಸಮಗ್ರ ಮಾಹಿತಿ ಕಲೆ ಹಾಕುತ್ತಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆಯಾಗಬೇಕು. ಯಾರೇ ಈ ಪ್ರಕರಣದಲ್ಲಿದ್ದರೂ ಅವರ ತಲೆದಂಡ ಆಗಬೇಕು. ಬಡವರಿಗೆ, ದಲಿತರಿಗೆ ಜಾಗ ಕೊಡಲು ಆಗುವುದಿಲ್ಲ. ಲೂಟಿ ಕೋರರಿಗೆ ಜಾಗ ಕೊಡುತ್ತಿದ್ದಾರೆ. ಈ ಸರ್ಕಾರ ಬಂದ ಮೇಲೆ ಎಲ್ಲಾ ದರಗಳು ಹೆಚ್ಚಾಗಿವೆ. ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಗಿದೆ. ಬೇರೆ ರಾಜ್ಯದ ಚುನಾವಣೆಗೆ ಎಷ್ಟು ಹಣ ಕೊಟ್ಟಿದ್ದಾರೆ, ಇವೆಲ್ಲವೂ ಸಮಗ್ರವಾಗಿ ಬಹಿರಂಗ ಆಗಬೇಕು ಎಂದು ಆಗ್ರಹಿಸಿದರು.
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…
ಮಡಿಕೇರಿ : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…
ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…
ಬೆಂಗಳೂರು : ರಾಜ್ಯದಲ್ಲಿ ಗ್ಯಾಸ್ ಸಿಗದೆ ಆಟೋ ಚಾಲಕರು ರಾತ್ರಿಯಿಡೀ ಕ್ಯೂ ನಿಲ್ಲುತ್ತಿದ್ದರೆ, ಜನಪ್ರತಿನಿಧಿಗಳಾದ ಶಾಸಕರು ಮಾತ್ರ ಐಪಿಎಲ್ ಟಿಕೆಟ್‌ಗಳ…
ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
ಬೆಂಗಳೂರು: ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ…