ಮೈಸೂರು: ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಖಂಡಿಸಿ ಶುಕ್ರವಾರ(ಜೂ.28) ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಮತ್ತು ಜಿಲ್ಲಾಧ್ಯಕ್ಷ ಮಹಾದೇವಸ್ವಾಮಿ ನೇತೃತ್ವದಲ್ಲಿ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ನೂರಾರು ಬಿಜೆಪಿ ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರೂ ಭಾಗಿಯಾಗಿದ್ದಾರೆ. ಈ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರ ಆಗ್ರಹಿಸಿದರು.





