ಮೈಸೂರು : ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ.
ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನಡೆದಿವೆ. ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಡ ಅಧಿದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ.
ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಯುವರಾಣಿ ತ್ರಿಶಿಕಾ ಕುಮಾರಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಪೂಜೆಯಲ್ಲಿ ಭಾಗಿಯಾಗಿದ್ದರು.ಚಿನ್ನದ ಪಲ್ಲಕ್ಕಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಯಿತು. ಈ ವೇಳೆ 21 ಕುಶಾಲತೋಪು ಸಿಡಿಸುವ ಮೂಲಕ ತಾಯಿಗೆ ಗೌರವ ಅರ್ಪಿಸಲಾಯಿತು.
ಬ್ಯಾಂಡ್, ಮಂಗಳವಾದ್ಯ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಸಹಸ್ರಾರು ಭಕ್ತರು ಪಾಲ್ಗೊಂಡು ವೈಭವವನ್ನು ಕಣ್ತುಂಬಿಸಿಕೊಂಡು, ಪುನೀತರಾದರು. ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರಧಾನ ಅರ್ಚಕ ಶಶಿ ಶೇಖರ್ ದೀಕ್ಷಿತ್ ಮಾತನಾಡಿ, ವರ್ದಂತಿ ಉತ್ಸವ ಎನ್ನುವುದು ಬಹಳ ವಿಶೇಷ ಉತ್ಸವ. ಪುರಾಣ ಪ್ರಸಿದ್ಧ ದೇವಾಲಯದಲ್ಲಿ ವರ್ದಂತಿ ಉತ್ಸವ ನಡೆಯುವುದೂ ಒಂದು ವಿಶೇಷ. ಸಂಸ್ಕೃತದಲ್ಲಿ ವರ್ದಂತಿ ಎನ್ನುತ್ತಾರೆ. ಕನ್ನಡದಲ್ಲಿ ಹುಟ್ಟುಹಬ್ಬ ಎನ್ನುತಾರೆ. ಅಮ್ಮನವರ ಹುಟ್ಟುಹಬ್ಬದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಎಂದಿನಂತೆ ಬೆಳಗಿನ ಜಾವ 4.30 ರಿಂದ ಅಭ್ಯುಂಜನ ಸ್ನಾನ, ಪಂಚಾಮೃತ ಅಭಿಷೇಕ ನಡೆದಿದೆ. 9.30 ಕ್ಕೆ ಮಹಾ ಮಂಗಳಾರತಿ, 10.30 ಕ್ಕೆ ರಾಜವಂಶಸ್ಥರು ಚಿನ್ನದ ಪಲ್ಲಕ್ಕಿಗೆ ಚಾಲನೆ ಕೊಡುತ್ತಾರೆ. ಸಂಜೆ 6.30 ಯಿಂದ 7.30 ರವರೆಗೆ ಅಭಿಷೇಕ ಇರುತ್ತದೆ. 8.30 ಕ್ಕೆ ಮಹಾರಾಜರ ದರ್ಬಾರ್ ಉತ್ಸವ ಇರುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರ ವಾಹನಗಳಿಗೆ ನಿಷೇಧಿಸಲಾಗಿದ್ದು, ಸಾರ್ವಜನಿಕರನ್ನು ಬೆಟ್ಟದ ಮೇಲೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಟ್ಟದ ಪಾದದ ಹೆಲಿಪ್ಯಾಡ್ ನಿಂದ ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಚಾಮುಂಡೇಶ್ವರಿ ದಾಸೋಹ ಭವನದಲ್ಲಿ ನಿರಂತರ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…