Mysore
13
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಸಂಭ್ರಮದ ವರ್ಧಂತಿ ಆಚರಣೆ

ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಆಚರಣೆ ಶನಿವಾರ (ಜು.27) ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿತು.

ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ರಾಜ್ಯದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾದರು. ವರ್ಧಂತಿ ಪ್ರಯುಕ್ತ ದೇವಿಗೆ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು.

ಇಂದು ಬೆಳಿಗ್ಗೆಯಿಂದಲೇ ತಾಯಿ ಚಾಮುಂಡಿ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ರುದ್ರಾಭಿಷೇಕ, ಪಂಚಾಮೃತಾಭಿಷೇಕ ಸೇರಿದಂತೆ ಹಲವು ವಿಶೇಷ ಪೂಜಾ ಕೈಕಂರ್ಯಗಳು ನಡೆದವು.

ದೇವಾಲಯವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿದ್ದು, ಚಾಮುಂಡಿ ದರ್ಶನ ಪಡೆದು ಭಕ್ತರು ಪುನೀತರಾದರು.

ಇನ್ನು ಚಾಮುಂಡಿ ತಾಯಿಯ ಪಲ್ಲಕ್ಕಿ ಉತ್ಸವಕ್ಕೆ ರಾಜಾಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ರಾಜಮಾತಾ ಪ್ರಮೋದಾದೇವಿ ಒಡೆಯರ್‌ ಅವರು ಚಾಲನೆ ನೀಡಿದರು. ಇದೇ ದಿನ ರಾತ್ರಿ 8 ಗಂಟೆಗೆ ಅರಮನೆ ಮಾದರಿಯ ದರ್ಬಾರ್‌ ಉತ್ಸವ ಚಾಮುಂಡಿ ತಾಯಿಗೂ ನಡೆಯಲಿದೆ.

Tags:
error: Content is protected !!