ಮೈಸೂರು

ಮೈಸೂರು | ನಗರದೆಲ್ಲೆಡೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

ಮೈಸೂರು : ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಆಷಾಢ ಮಾಸದ ಕೃಷ್ಣಪಕ್ಷ ಅಷ್ಠಮಿ ರೇವತಿ ನಕ್ಷತ್ರದ ದಿನದಂದು ಚಾಮುಂಡೇಶ್ವರಿ ವರ್ಧಂತಿ ಆಚರಿಸಲಾಗುತ್ತಿದ್ದು, ಅದರಂತೆ ಗುರುವಾರ ನಗರದಲ್ಲಿ ವರ್ಧಂತಿಯ ಸಂಭ್ರಮ ಮನೆ ಮಾಡಿತ್ತು. ನಗರದ ವಿವಿಧೆಡೆ ಗಳಲ್ಲಿರುವ ಚಾಮುಂಡೇಶ್ವರಿ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.

ಕೆ.ಜಿ.ಕೊಪ್ಪಲಿನಲ್ಲಿರುವ ಚಾಮುಂಡೇಶ್ವರಿ ದೇಗುಲದಲ್ಲಿ ಬೆಳಗಿನಿಂದಲೇ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ವಿವಿಧ ಹೂವುಗಳಿಂದ ದೇವಸ್ಥಾನವನ್ನು ಅಲಂಕರಿಸಿದ್ದು, ಸಾರ್ವಜನಿಕರ ಕಣ್ಮನ ಸೆಳೆಯಿತು. ದೇವಸ್ಥಾನಕ್ಕೆ ಬಂದ ಭಕ್ತರು ಸರದಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿ ದರ್ಶನ ಪಡೆದರು.

ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನ, ಎಂ.ಜಿ.ರಸ್ತೆಯಲ್ಲಿರುವ ಚಾಮುಂಡೇಶ್ವರಿ ದೇವಾಲಯ, ವಿದ್ಯಾರಣ್ಯಪುರಂನ ಚಾಮುಂಡಿವನ, ಸೂರ್ಯಬೇಕರಿ ಬಳಿ ಇರುವ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ನಗರದ ಹಲವೆಡೆ ಇರುವ ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಗರದ ಹಲವೆಡೆ ಪ್ರಸಾದ ವಿತರಣೆ:
ಚಾಮುಂಡೇಶ್ವರಿಯ ವರ್ಧಂತಿ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ, ವೃತ್ತಗಳಲ್ಲಿ ಚಾಮುಂಡೇಶ್ವರಿ ದೇವಿಯ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಿಸಲಾಯಿತು. ದೇವರಾಜ ಮೊಹಲ್ಲಾದ ಶ್ರೀ ರಾಮಮಂದಿರದ ಮುಂಭಾಗ, ಅಗ್ರಹಾರ ವೃತ್ತ, ಚಾಮುಂಡಿಪುರಂ, ಕುವೆಂಪುನಗರ, ಒಂಟಿಕೊಪ್ಪಲು, ಆರ್‌ಟಿಒ ವೃತ್ತ, ವಿದ್ಯಾರಣ್ಯಪುರಂ, ಸಿದ್ಧಾರ್ಥನಗರ, ಬಸವೇಶ್ವರ ರಸ್ತೆ, ರಾಮಸ್ವಾಮಿ ವೃತ್ತದ ಬಳಿ ಸೇರಿದಂತೆ ಹಲವೆಡೆ ಪ್ರಸಾದ ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

15 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

16 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

16 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

16 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

16 hours ago