ಮೈಸೂರು

ರಕ್ಷಕ ಮಹಿಷನನ್ನು ರಾಕ್ಷಸನನ್ನಾಗಿಸಿದ ವೈದಿಕರು : ಪೆರಿಯಾರ್‌ ಚಳವಳಿಗಾರ ಮಣಿ

ಮೈಸೂರು : ಮಹಿಷ ಓರ್ವ ರಕ್ಷಕನಾಗಿದ್ದ. ಪುರಾಣದ ಕಥೆ ಕಟ್ಟಿ ವೈದಿಕರು ಅತನನ್ನು ರಾಕ್ಷಸನನ್ನಾಗಿ ಬಿಂಬಿಸಿದರು. ನಿಜ ಸತ್ಯವನ್ನು ಅರಿಯದ ಆತನ ವಂಶಸ್ಥರು ಇಂದಿಗೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಪೆರಿಯಾರ್ ಚಳವಳಿಗಾರ ಕೊಳತ್ತೂರು ಮಣಿ ಹೇಳಿದರು.

ನಗರದ ಪುರಭವನದ ಆವರಣದಲ್ಲಿ ಬುಧವಾರ ಮಹಿಷಾ ದಸರಾ ಆಚರಣಾ ಸಮಿತಿ ಏರ್ಪಡಿಸಿದ್ದ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸುರರು ಎಂದರೆ ಮದ್ಯ ಸೇವನೆ ಮಾಡುವವರು. ಅಸುರ ಎಂದರೆ ಮದ್ಯ ಸೇವಿಸದವರು ಎಂದು ಅರ್ಥ. ವಿಚಿತ್ರವೆಂದರೆ ಇಂದು ಸಮಾಜದಲ್ಲಿ ಮದ್ಯ ಸೇವನೆ ಮಾಡುವವರನ್ನು ದೇವರೆಂದು, ಮದ್ಯ ಸೇವನೆ ಮಾಡದವರನ್ನು ರಾಕ್ಷಸರೆಂದು ಬಿಂಬಿಸುವ ಕೆಲಸವಾಗುತ್ತಿದೆ. ಇದು ಸರಿಯೇ? ಎಂದು ಪ್ರಶ್ನಿಸಿದರು.

ಆರ್ಯರು ಹಾಗೂ ದ್ರಾವಿಡರ ನಡುವೆ ಅನೇಕ ಯುದ್ಧಗಳೇ ನಡೆದಿವೆ. ಮುರುಗ,ವೆಂಕಟೇಶ್ವರ, ಅಯ್ಯಪ್ಪ ಎಲ್ಲರೂ ಮೂಲತಃ ಬೌದ್ಧರು. ಆದರೆ, ವೈದಿಕರು ಅವರೆಲ್ಲರನ್ನೂ ದೇವತೆಗಳು ಎಂದು ಬದಲಾಯಿ ಸಿಬಿಟ್ಟಿದ್ದಾರೆ. ಅವರ ಮೂಲ ಉದ್ದೇಶ ದ್ರಾವಿಡ ಸಮುದಾಯ ಹಾಗೂ ಮುಖಂಡರ ವಿನಾಶ ಮಾತ್ರವಾಗಿತ್ತು ಎಂದರು.

ಇದನ್ನೂ ಓದಿ:-ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸಹಿತ ಗಣ್ಯರ ಸಂತಾಪ

ಇದೀಗ ಬುದ್ಧ ಮಹಾವಿಷ್ಣುವಿನ ಅವತಾರ ಎಂದು ಹೊಸ ವರಸೆಯನ್ನು ತೆಗೆದಿದ್ದಾರೆ. ಅವರ ವಾದವನ್ನು ನಾವುಗಳು ಮುಲಾಜಿಲ್ಲದೆ ತೊಡೆದುಹಾಕಬೇಕು. ಮುಂದಾದರೂ ತಳ ಸಮುದಾಯಗಳು ಸತ್ಯವನ್ನು ಅರಿತು ಎಚ್ಚರಿಕೆಯಿಂದ ಮುನ್ನಡೆಯಬೇಕು ಎಂದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಗಾಂಧಿನಗರದ ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ನಾಡಹಬ್ಬ ದಸರಾಗೆ ಖರ್ಚು ಮಾಡುವುದು ಜನರ ತೆರಿಗೆ ಹಣವಾದ್ದರಿಂದ ಮಹಿಷನನ್ನೂ ಸ್ಮರಿಸಬೇಕು. ಜೊತೆಗೆ ಸರ್ಕಾರದ ವತಿಯಿಂದಲೇ ಮಹಿಷ ದಸರಾ ಆಚರಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚೆಗೆ ಲೇಖಕ ಕೃಷ್ಣಮೂರ್ತಿ ಅವರ ‘ಮಹಿಷ ಮರ್ದಿನಿ’ ಕೃತಿ ಬಿಡುಗಡೆಯಾಗಿದೆ. ಗೆಜೆಟಿಯರ್, ಬ್ರಿಟಿಷ್ ಲೇಖಕರು ಬರೆದಿರುವುದು ಸುಳ್ಳು. ಎಮ್ಮೆಯಿಂದ ಮೈಸೂರಿಗೆ ಹೆಸರು ಬಂದಿದೆ ಎಂದು ಉಲ್ಲೇಖಿಸಿದ್ದಾರೆ. ಹಾಗಾದರೆ ಎಮ್ಮೆ ಸಾಕುತ್ತಿದ್ದವರು ಯಾರು? ಕೋಣ ಯಾರ ಸಂಕೇತ? ಎಂದು ಪ್ರಶ್ನಿಸಿದರು.

ಮೈಸೂರು ಮಹಾರಾಜರನ್ನು ಮಹಿಷ ಮಂಡಲಾಧೀಶ ಬಹುಪರಾಕ್ ಎನ್ನಲಾಗುತ್ತದೆ. ಮಹಾರಾಜರು ಬರೆದ ಪತ್ರಗಳಲ್ಲಿ ಮಹಿಷಪುರವಾಸಿ ಎಂದು ಉಲ್ಲೇಖಿಸಿದ್ದಾರೆ. ಮಹಾರಾಣಿಯನ್ನು ಪಟ್ಟದ ಮಹಿಷಿ ಎನ್ನುತ್ತಿದ್ದರು. ಇವೆಲ್ಲ ಸುಳ್ಳೇ? ಯಾವುದನ್ನು ಸೃಷ್ಟಿ ಮಾಡಬೇಕಾದರೂ ದಾಖಲೆ ಇರಬೇಕು. ಚರಿತ್ರೆಯನ್ನು ದಮನ ಮಾಡಲಿಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು.

ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ಅಮೆರಿಕದ ಚಿಕಾಗೋದಲ್ಲಿ ನಡೆದ ಸರ್ವ ಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸ್ವಾಮಿ ವಿವೇಕಾನಂದರು, ಸಮಾನತೆ, ಮಾನವೀಯತೆ ಹಾಗೂ ಮನುಷ್ಯತ್ವ ಎತ್ತಿ ಹಿಡಿಯುವುದೇ ಬೌದ್ಧ ಧರ್ಮ. ನಾನು ಬುದ್ಧಿಸ್ಟ್ ಎಂದು ಹೇಳಿದ್ದಾರೆ ಎಂದರು.

ವೈದಿಕ, ಬ್ರಾಹ್ಮಣ, ಹಿಂದೂ, ಆರ್ಯ ಎಲ್ಲವೂ ಒಂದೇ. ಮನುಸ್ಮೃತಿಯಲ್ಲಿ ಶೂದ್ರರನ್ನು ಗುಲಾಮರು ಎಂದು ಹೇಳಲಾಗಿದೆ. ಹಿಂದೂ ಧರ್ಮವನ್ನು ವಿವೇಕಾನಂದರು ಟೀಕೆ ಮಾಡಿದಷ್ಟು ಬೇರೆ ಯಾರೂ ಮಾಡಿಲ್ಲ. ಇದನ್ನು ಶೂದ್ರರು ಅರ್ಥ ಮಾಡಿಕೊಳ್ಳಬೇಕು. ಈ ಮೂಲಕ ನೀವು ಸ್ವಾಭಿಮಾನಿಗಳಾಗಬೇಕು ಎಂದರು.

ನಿವೃತ್ತ ಡಿಸಿಪಿ ಸಿದ್ದರಾಮು ಮಾತನಾಡಿ, ಸರ್ಕಾರ ದಸರಾ ಹಬ್ಬವನ್ನು ಅದ್ಧೂರಿಯಿಂದ ಆಚರಿಸುತ್ತಿದೆ. ಇದರ ಜೊತೆಗೆ ಜನರಿಗೆ ಸತ್ಯವನ್ನು ತಿಳಿಸಿ ಆಚರಿಸಿದಲ್ಲಿ ಅರ್ಥಪೂರ್ಣವಾಗಿರುತ್ತದೆ. ದಸರಾದಲ್ಲಿ ಸಂವಿಧಾನ ಪುಸ್ತಕವನ್ನು ಶಾಂತಿಯ ಸಂಕೇತವಾದ ಆನೆಯ ಮೇಲಿಟ್ಟು ಮೆರವಣಿಗೆ ಮಾಡಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಮಹಾಪೌರ ಪುರುಷೋತ್ತಮ್, ಚಾಮುಂಡಿ ಬೆಟ್ಟದಲ್ಲಿರುವ ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲು ಅವಕಾಶ ಕೊಡದೆ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿ ಎಂದು ಯಾವ ಕಾನೂನು ಹೇಳಿದೆ ಎಂದು ಪ್ರಶ್ನಿಸಿದರು.

ಮುಂದಿನ ದಿನಗಳಲ್ಲಿ ಪ್ರತೀ ಹುಣ್ಣಿಮೆಯ ದಿನ ನಾವುಗಳು ಚಾಮುಂಡಿಬೆಟ್ಟಕ್ಕೆ ತೆರಳಿ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುತ್ತೇವೆ. ಇದಕ್ಕಾಗಿ ಯಾರ ಬಳಿಯೂ ಅರ್ಜಿ ಹಾಕುವುದಿಲ್ಲ. ಅಪ್ಪಣೆಯನ್ನೂ ಕೇಳುವುದಿಲ್ಲ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಲೇಖಕ ಸಿದ್ದಸ್ವಾಮಿ, ಮಹಿಷಾಸುರ ಮೈಸೂರಿನ ಅಸ್ಮಿತೆ. ಮೌಢ್ಯತೆಯ ವಿರೋಽ. ಯಾರೊಂದಿಗೂ ವೈರತ್ವ ತಾಳಲು ಮಹಿಷಾ ದಸರಾ ಆಚರಿಸುತ್ತಿಲ್ಲ, ನಮ್ಮ ಅಸ್ತಿತ್ವ ಕಂಡುಕೊಳ್ಳಲು ಆಚರಿಸುತ್ತಿದ್ದೇವೆ ಎಂದರು.

ಲೇಖಕ ದಿಲೀಪ್ ನರಸಯ್ಯ ಮಾತನಾಡಿ, ಸಂಸ್ಕತದಲ್ಲಿ ಮಹಿಷ ಎಂದರೆ ಶ್ರೇಷ್ಠ, ಬಲಿಷ್ಠ ಎಂದರ್ಥವಿದೆ. ಅದು ರಾಕ್ಷಸ ಹೇಗಾಯಿತು? ಯಾವ ರೀತಿ ನರ ಭಕ್ಷಕನಾದ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದರು.

ಸವಿತಾನಂದ ಸ್ವಾಮೀಜಿ, ಪಾಲಿಕೆ ಮಾಜಿ ಸದಸ್ಯರಾದ ಪಲ್ಲವಿ ಬೇಗಂ, ಸಿದ್ದಪ್ಪ, ನಾಗರತ್ನ, ದಲಿತ ಮಹಸಭಾ ಅಧ್ಯಕ್ಷ ಸಿದ್ದರಾಜು, ಹೋರಾಟಗಾರ ಹರಿಹರ ಆನಂದಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

19 mins ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

6 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

6 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

6 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

6 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

6 hours ago