ಮೈಸೂರು: ಇಲ್ಲಿನ ಕೆ.ಆರ್.ಮೊಹಲ್ಲಾದ ಡಿ.ಬನುಮಯ್ಯ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಶ್ರೀ ವೀರಭದ್ರೇಶವರ ಸ್ವಾಮಿಯ ಜನ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10.30ರಿಂದ 11.30ರೊಳಗಿನ ಶುಭ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇಗುಲದ ಆಸುಪಾಸಿನ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಮಹಾರಥೋತ್ಸವದಲ್ಲಿ ನೂರಾರು ಸಾರ್ವಜನಿಕರು ಭಾಗಿಯಾಗಿ ದೇವರ ದರ್ಶನ ಪಡೆದು ಪುನೀತರಾದರು.





