ಮೈಸೂರು: ಸಂಡೂರು, ಚನ್ನಪಟ್ಟಣ, ಶಿಗ್ಗಾವಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಹರೀಶ್ ಗೌಡ ವಿಶ್ವಾಸದಿಂದ ಹೇಳಿದ್ದಾರೆ.
ನಗರದ ವಾರ್ಡ್ ನಂಬರ್ 23ರ ವ್ಯಾಪ್ತಿಯ ಕೊಲ್ಲಾಪುರದಮ್ಮ ದೇವಸ್ಥಾನದ ಹಿಂಭಾಗ ಅಂದಾಜು 3.5 ಲಕ್ಷ ವೆಚ್ಚದ ಕೊಳವೆಬಾವಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಅವರು ಮಾತನಾಡಿದರು.
ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಘಟನಾ ಚತುರತೆಯಿಂದ ನಮಗೆ ಗೆಲುವು ಖಚಿತವಾಗಲಿದೆ. ಜೊತೆಗೆ ಜನತೆ ಕಾಂಗ್ರೆಸ್ ಪಕ್ಷದ ಪರ ಇದ್ದಾರೆ ಎಂದು ಹೇಳಿದರು.
ವಾರ್ಡ್ 23 ರ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದೆ ಹಾಗಾಗಿ ಬೋರ್ ವೆಲ್ ಕನೆಕ್ಷನ್ ಕೊಡುವ ಕೆಲಸ ಮಾಡಲಾಗುತ್ತಿದೆ. ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಈ ವೇಳೆ ಹರೀಶ್ ಗೌಡ ಭರವಸೆ ನೀಡಿದರು.
ಟ್ಯಾಂಕ್ ನಿರ್ಮಾಣದ ಕೆಲಸ ಶೇ.70 ರಷ್ಟು ಮುಗಿದಿದೆ. ರಮಾವಿಲಾಸ್ ರಸ್ತೆ, ಬಂಡಿಕೇರಿ, ಮರಿಮಲ್ಲಪ್ಪ ಶಾಲೆ ಹಿಂಬಾಗ ಮತ್ತು ಮುಂಭಾಗ ಹೀಗೆ ಈ ಭಾಗದ ಎಲ್ಲಾ ಕಡೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುತ್ತದೆ, ಇನ್ನು ಒಂದು ತಿಂಗಳೊಳಗೆ ಕಾಮಗಾರಿ ಮುಗಿದು ಕುಡಿಯುವ ನೀರು ಸರಬರಾಜು ಮಾಡುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ನಗರ ಪಾಲಿಕೆ ಮಾಜಿ ಸದಸ್ಯ ನಾಗಭೂಷಣ, ಕಾಂಗ್ರೆಸ್ ಮುಖಂಡರುಗಳಾದ ರಾಜೀವ, ಮಹದೇವ, ಆನಂದ, ರವಿಚಂದ್ರ, ಮಂಜುನಾಥ, ಶಾಂತ ,ಮಂಗಳ, ಸಂಜಯ, ಲೋಕೇಶ, ಮುಸ್ತಾಫ , ಯುಜಿಡಿ ವಾಟರ್ ಸಪ್ಲೈ ಅಧಿಕಾರಿ ಜಗದೀಶ್ ಆರ್, ವಾಟರ್ ಇನ್ಸ್ಪೆಕ್ಟರ್ ಮಹದೇವ್ ಹಾಗೂ ಅನೇಕ ಮುಖಂಡರು ಹಾಜರಿದ್ದರು.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…