ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್ ವಿಜಯ್ ಶಂಕರ್ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.
ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್ ಶಂಕರ್ ಅವರು ಮೊದಲ ಬಾರಿಗೆ ಕನ್ನಡದ ಖಾಸಗಿ ವಾಹಿನಿ ಜತೆ ಮಾತನಾಡಿದ್ದು, ನಾನು 2010ರಲ್ಲೇ ಸಿಎಂ ಆಗಬೇಕಿತ್ತು. ಅಂದು ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಗಾದಿಗಕ್ಕೆ ತಮ್ಮ ಹೆಸರನ್ನು ಶಿಫಾರಸ್ಸು ಮಾಡಿದ್ದರು. ಅವಕಾಶ ವಂಚಿತನಾದೆ ಈಗ 14 ವರ್ಷಗಳ ಬಳಿಕ ವನವಾಸದ ನಂತರ ಪಕ್ಷದಿಂದ ನನಗೆ ದೊಡ್ಡ ಹದ್ದೆ ಸಿಕ್ಕಿದೆ ಎಂದರು.
2019 ರಲ್ಲಿ ಕಾಂಗ್ರೆಸ್ ಸೇರಿದ್ದ ವಿಜಯ್‌ಶಂಕರ್ ಪ್ರತಾಪ್ ಸಿಂಹ ವಿರುದ್ಧ ಸೋಲು ಕಂಡಿದ್ದರು. ಬಳಿಕ ಅಲ್ಲಿಂದ ಬಿಜೆಪಿಗೆ ಮತ್ತೆ ಸೇರಿದ್ದರು. ಇನ್ನು ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬಿಟ್ಟು ಹೋಗಿ ರಾಜಕೀಯವಾಗಿ ನಾನು ತಪ್ಪು ಮಾಡಿದ್ದೆ. ಇವೆಲ್ಲವೂ ರಾಜಕೀಯದಲ್ಲಿ ಸಹಜವೂ ಕೂಡಾ ಆಗಿದೆ ಎಂದು ತಿಳಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…